Breaking News

ಜಗದೀಶ್ ವಿರುದ್ಧ ಕೇಸ್: ಹೋರಾಟಕ್ಕೆ ಮುಂದಾದ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ

Spread the love

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ವಿರುದ್ಧ ಫೇಸ್ ಬುಕ್​​ನಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿದ್ದ, ವಕೀಲ ಜಗದೀಶ್ ವಿರುದ್ಧ ಸುಳ್ಳು ಜಾತಿ ನಿಂದನೆ ಕೇಸ್ ದಾಖಲಿಸಿರುವುದನ್ನು ಖಂಡಿಸಿ ವಕೀಲರು ಹೋರಾಟ ನಡೆಸಲು ಮುಂದಾಗಿದ್ದಾರೆ.

ಈ ಕುರಿತಂತೆ ಪೂರ್ವಭಾವಿ ಸಭೆ ನಡೆಸಲು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್ ಮುಂದಾಗಿದ್ದಾರೆ. ನಾಳೆ ಸಂಜೆ ಸಭೆ ನಡೆಸಲು ತೀರ್ಮಾನಿಸಿದ್ದು, ಸಮಾನ ಮನಸ್ಕ ವಕೀಲರು ಹಾಗೂ ವಕೀಲರ ಸಂಘಟನೆಗಳು ಸಭೆ ಆಗಮಿಸುವಂತೆ ಕರೆ ನೀಡಿದ್ದಾರೆ.

ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ ಯುುವಿಸಿಇ ಹಳೆಯ ವಿದ್ಯಾರ್ಥಿಗಳ ಸಂಘದ ಸಭಾಭವನದಲ್ಲಿ ಸಭೆ ನಡೆಯಲಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದ ವಕೀಲ ಜಗದೀಶ್ ವಿರುದ್ಧ ಸುಳ್ಳು ಜಾತಿ ನಿಂದನೆ ಕೇಸ್ ದಾಖಲಿಸಿರುವ ಪೊಲೀಸ್ ಇಲಾಖೆಯ ಅಧಿಕಾರ ದುರುಪಯೋಗ ಕ್ರಮ ಖಂಡಿಸಿ ಹೋರಾಟ ನಡೆಸಲು ಪೂರ್ವಭಾವಿಯಾಗಿ ಈ ಸಭೆ ಆಯೋಜಿಸಲಾಗಿದೆ. ಸಭೆ ಸಂಜೆ 4.30ಕ್ಕೆ ನಡೆಯಲಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ