ಧಾರವಾಡ: ನಿನ್ನೆ ತಡರಾತ್ರಿ ಧಾರವಾಡ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿನ ಶ್ರೀಗಂಧದ ಮರ ಕಳ್ಳತನವಾಗಿದೆ.
ಬೆಳಗ್ಗೆ ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ.ಎಸ್.ಉಪ್ಪಾರ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನಿನ್ನೆ ತಡರಾತ್ರಿ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿದೆ. ಬೆಳಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮರ ಕಡಿದ ಸ್ಥಳವನ್ನು ಪರಿಶೀಲಿಸಿದ್ದಾರೆ.