Breaking News

ಕೊಲೆ ಆರೋಪಿಗಳಲ್ಲಿ ಮೂವರು ಶಿವಮೊಗ್ಗದವರು, ಇಬ್ಬರ ಬಗ್ಗೆ ಶೋಧ ನಡೆಯುತ್ತಿದೆ: ಗೃಹ ಸಚಿವ ಆರಗ

Spread the love

ಬೆಂಗಳೂರು : ಹಿಂದುಪರ ಸಂಘಟನೆಯ ಯುವಕ ಹರ್ಷನ ಕೊಲೆ ಕೇಸ್​ನಲ್ಲಿ ಬಂಧನ ಆಗಿರುವವರಲ್ಲಿ ಮೂವರು ಶಿವಮೊಗ್ಗದವರಾಗಿದ್ದಾರೆ. ಇಬ್ಬರ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಶಕ್ತಿಭವನದಲ್ಲಿ ಸಿಎಂ ಭೇಟಿಯಾಗಿ ಮಾತನಾಡಿದ ಅವರು, ಶಿವಮೊಗ್ಗ ಘಟನೆ ಬಗ್ಗೆ ಸಿಎಂಗೆ ವಿವರಣೆ ಕೊಟ್ಟಿದ್ದೇನೆ. ಮತ್ತೆ ಸಭೆ ಸೇರೋಣ ಎಂದು ಅವರು ಹೇಳಿದ್ದಾರೆ. ಪೊಲೀಸರು ಇಬ್ಬರ ಬಗ್ಗೆ ಶೋಧ ನಡೆಸಿದ್ದಾರೆ. ಇದರ ಹಿಂದೆ ಇನ್ನಷ್ಟು ಜಾಲ ಇರುವ ಬಗ್ಗೆಯೂ ತನಿಖೆ ಮಾಡುತ್ತಿದ್ದಾರೆ. ಮೇಲ್ನೋಟಕ್ಕೆ 5 ಮಂದಿ ಅಂತಾ ಕಾಣುತ್ತಿದೆ. ಹಿಜಾಬ್ ಪ್ರಕರಣಕ್ಕೂ ಇದಕ್ಕೂ ಲಿಂಕ್ ಇದ್ಯಾ ಎಂಬುದರ ಬಗ್ಗೆಯೂ ತನಿಖೆ ಮಾಡುತ್ತಿದ್ದಾರೆ ಎಂದರು.

ಪೊಲೀಸರು ಸಂಯಮದಿಂದ ವರ್ತಿಸಿದ್ದಾರೆ. ಒಂದು ವೇಳೆ ಫೈರ್ ಮಾಡಿದ್ರೆ ಇನ್ನೊಂದು ನಾಲ್ಕು ಹೆಣಗಳು ಬೀಳುತ್ತಿದ್ದವು. ಆ ಕೆಲಸ‌ವನ್ನು ನಮ್ಮ ಪೊಲೀಸರು ಮಾಡಲಿಲ್ಲ. ಸಂಯಮ ಕಾಯ್ದುಕೊಂಡಿದ್ದಾರೆ. ಸಂಯಮ ಮೀರಿ ವರ್ತಿಸಿ ಫೈರಿಂಗ್ ಮತ್ತು ಲಾಠಿಚಾರ್ಜ್​​ ಮಾಡಿದರೆ ಇನ್ನಷ್ಟು ಅನಾಹುತಗಳು ಸಂಭವಿಸುತ್ತಿತ್ತು ಎಂದರು

ಶಿವಮೊಗ್ಗ ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಪರಿಸ್ಥಿತಿ ನೋಡಿಕೊಂಡು ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು. ಯುವಕನ ಕೊಲೆ ಪ್ರಕರಣವನ್ನು ಎನ್​​ಐಎ ತನಿಖೆಗೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, ಹಿರಿಯ ಪೊಲೀಸ್​​ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಧಿಕಾರಿಗಳು ನೀಡುವ ವರದಿ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ