ಧಾರವಾಡ: ಪೀರನವಾಡಿ ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆಯನ್ನು ಜಿಲ್ಲಾಡಳಿತವೇ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೀರನವಾಡಿ ವಿವಾದದಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಈ ಸಮಸ್ಯೆಯನ್ನು ಬಗೆ ಹರಿಸಬೇಕು ಎಂದು ಹೇಳಿದರು.
ಎರಡು ಸಮಾಜದ ಮುಖಂಡರನ್ನು ಕರೆದು ಸಭೆ ನಡೆಸಬೇಕು. ಅಂದಾಗ ಈ ಸಮಸ್ಯೆ ಬಗೆ ಹರಿಯಲಿದೆ. ಜಿಲ್ಲಾಡಳಿತ ಆದಷ್ಟು ಬೇಗ ಎರಡು ಸಮಾಜ ಮುಖಂಡರ ಸಭೆ ನಡೆಸಿ ಸಂಧಾನ ಮಾಡಬೇಕು ಎಂದರು.