Breaking News

ಹರ್ಷನ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸುವ ಮೊದಲು ಆತನ ಸಹಚರನನ್ನು ಪೊಲೀಸರು ವಶಕ್ಕೆ ಪಡೆದಿದ್ದ ಸಿಸಿಟಿವಿ ದೃಶ್ಯಾವಳಿ ಸಿಕ್ಕಿದೆ.

Spread the love

 

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ಸಂಬಂಧ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, 12 ಮಂದಿಯನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಮೂವರಲ್ಲಿ ಓರ್ವ ಆರೋಪಿಯನ್ನು ಬಂಧಿಸಲು ಪೊಲೀಸರು ಸ್ಕೆಚ್‌ ಹಾಕಿದ್ದ ಸಿಸಿಟಿವಿ ವಿಡಿಯೋ ಇದೀಗ ವೈರಲ್ ಆಗಿದೆ.

ಮೊದಲು ಆರೋಪಿಯ ಸಹಚರನನ್ನು ಆತನ ಮನೆಯ ಬಳಿಯೇ ವಶಕ್ಕೆ ಪಡೆದಿದ್ದ ಪೊಲೀಸರು, ಈತನ ಮೂಲಕವೇ ಕೊಲೆ ಆರೋಪಿ ಬಂಧನಕ್ಕೆ ಬಲೆ‌ ಬೀಸಿದ್ದರು. ಸಹಚರನನ್ನು ಪೊಲೀಸರು ವಶಕ್ಕೆ ಪಡೆದ ದೃಶ್ಯದ ಸಿಸಿಟಿವಿ ಫೂಟೇಜ್ ಸಿಕ್ಕಿದೆ.

ಆರೋಪಿಯ ಸಹಚರನನ್ನು ಪೊಲೀಸರು ವಶಕ್ಕೆ ಪಡೆದಿದ್ದ ಸಿಸಿಟಿವಿ ದೃಶ್ಯಾವಳಿತುಂಗಾನಗರ ಠಾಣೆ ಪೊಲೀಸ್​ ಇನ್ಸ್​ಪೆಕ್ಟರ್​ ದೀಪಕ್ ನೇತೃತ್ವದ ಪೊಲೀಸರ ತಂಡ ಆರೋಪಿಯ ಸಹಚರನನ್ನು ಆತನ ಮನೆಯ ಬಳಿಯೇ ವಶಕ್ಕೆ ಪಡೆದಿತ್ತು. ಹರ್ಷ ಕೊಲೆಯಾದ ದಿನ ರಾತ್ರಿಯೇ ಕೊಲೆ ಆರೋಪಿಯ ಸಹಚರನನ್ನು ಮುಂದಿಟ್ಟುಕೊಂಡು ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಆದರೆ ಕೊಲೆ‌ ನಡೆದ ದಿನ ಯಾರನ್ನೂ ಬಂಧಿಸಿರಲಿಲ್ಲ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ