ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,553 ಜನರಲ್ಲಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 278 ಜನ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,12,622 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,64,522 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 31,377 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,21,89,887 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 33,84,744 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,76,19,39,020 ಡೋಸ್ ಲಸಿಕೆ ಹಾಕಲಾಗಿದೆ.