ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಆರೋಪಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶ್ರೀ ಕನಕ ಸೇವಾ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ ರಾಯಣ್ಣನ ವೃತ್ತದವರೆಗೆ ರ್ಯಾಲಿ ಮಾಢಿ, ಡಾ. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ನಡೆಸಿ ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಕುರಿಗಾಯಿ ಮಹಿಳೆ ಲಕ್ಷ್ಮೀ ಕಳ್ಳಿಮನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡನೀಯವಾಗಿದ್ದು , ಆರೋಪಗಳಿಗೆ ಉಗ್ರವಾದ ಶಿಕ್ಷೆ ವಿಧಿಸಬೇಕು. ಅಲ್ಲದೇ ತೆಲಂಗಾಣದಲ್ಲಿ ಅತ್ಯಾಚಾರಗೈದ ಆರೋಪಿಗೆ ಎನ್ ಕೌಂಟರ್ ಮಾಡಿ ಶಿಕ್ಷೆ ವಿಧಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.