Breaking News

ಹರ್ಷ ಮನೆಗೆ ಬಿಜೆಪಿ ನಾಯಕರ ಭೇಟಿ, ಸಾಂತ್ವನ

Spread the love

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ ಕುಮಾರ್ ಕಟೀಲ್ (Nalin Kumar Kateel) ಅವರು ಶಿವಮೊಗ್ಗದಲ್ಲಿ ಕೊಲೆಯಾಗಿರುವ ಹರ್ಷ ಅವರ ಕುಟುಂಬದವರನ್ನು ಇಂದು ಭೇಟಿ ಮಾಡಿ ಸಾಂತ್ವನ ಹೇಳಿದರು. ‌

ಸಚಿವರಾದ ಕೆ.ಎಸ್.ಈಶ್ವರಪ್ಪ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಪ್ರಕೋಷ್ಠಗಳ ಸಂಚಾಲಕರಾದ ಭಾನುಪ್ರಕಾಶ್, ಶಾಸಕ ಯು. ರಾಜೇಶ್ ನಾಯ್ಕ್, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಈ ಸಂದರ್ಭದಲ್ಲಿ ಇದ್ದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಅವರು, ಹಿಂದೂ ಸಂಘಟನೆಯ ಹರ್ಷ ಕಗ್ಗೊಲೆ (Harsha Murder) ಆಗುವ ಕಲ್ಪನೆ ನಮಗ್ಯಾರಿಗೂ ಇರಲಿಲ್ಲ. ಕಗ್ಗೊಲೆ ಆದ ತಕ್ಷಣ ಕೊಲೆಗಡುಕ ಗೂಂಡಾಗಳನ್ನು ರಾಜ್ಯ ಸರ್ಕಾರ ಬಂಧಿಸಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‍ ಕುಮಾರ್ ಕಟೀಲ್ ಅವರು ಇಲ್ಲಿಗೆ ಬಂದು ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸಹಕಾರದ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.‌ 


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ