Breaking News

ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ

Spread the love

ಬೆಂಗಳೂರು,ಆ.28-ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ.

ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ ಎಂದಿದ್ದಾರೆ.ಕನ್ನಡಿಗರೆಂದರೆ, ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್ ಎಂಬ ಶಾಸನದ ಉಲ್ಲೇಖ ಮಾಡಿದ್ದಾರೆ.


Spread the love

About Laxminews 24x7

Check Also

ಆರ್​ಟಿಒ ಅಧಿಕಾರಿಗಳಿಂದ 98 ಆಟೋಗಳು ಜಪ್ತಿ

Spread the loveಬೆಂಗಳೂರು: ನಿಗದಿ ಮಾಡಿದ್ದ ಪ್ರಯಾಣ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿ ಕಾನೂನು ಬಾಹಿರವಾಗಿ ಆಟೋ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ