ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಕಾಂಗ್ರೆಸ್ ಪಕ್ಷದ ಕರ್ನಾಟಕ ರಾಜ್ಯದ ಮುಖಂಡರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೂ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಚರ್ಚಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಸುಮಾರು 20 ನಾಯಕರು ಪಾಲ್ಗೊಂಡಿದ್ದರು. ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲ ಸಹ ಭಾಗವಹಿಸಿದ್ದ ಸಭೆಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಈ ವೇಳೆ ಉಳಿದ ನಾಯಕರು ರಾಹುಲ್ ನಿವಾಸದ ಲಾಂಜ್ನಲ್ಲಿ ಕುಳಿತು ಪರಸ್ಪರ ಮಾತುಕತೆ ನಡೆಸಿದರು. ಮಾತುಕತೆಯ ವಿವರಗಳು ಬಹಿರಂಗಗೊಂಡಿಲ್ಲ.
ರಾಹುಲ್ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒಳ ಜಗಳಗಳು ಇಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದರು. ಮೇಕೆದಾಟು 2ನೇ ಹಂತದ ಪಾದಯಾತ್ರೆಗೆ ಸುರ್ಜೇವಾಲ ಚಾಲನೆ ನೀಡಲಿದ್ದಾರೆ ಎಂದರು.
Laxmi News 24×7