Breaking News

ರಾಯಬಾಗ&ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿ ಅಮೋಘಾ ಚೌಗಲಾ ಯುಕ್ರೇನ್​ನಲ್ಲಿ ಸಿಲುಕಿರುವ ವಿದ್ಯಾರ್ಥಿನಿಯರು.

Spread the love

ಬೆಳಗಾವಿ: ರಷ್ಯಾ ಯುದ್ಧ ಸಾರಿರುವ ಉಕ್ರೇನ್ ದೇಶದಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ವ್ಯಾಸಂಗ ‌ಮಾಡುತ್ತಿದ್ದಾರೆ. ಉಕ್ರೇನ್ ‌ಮೇಲೆ ರಷ್ಯಾ ನಿರಂತರ ದಾಳಿ ನಡೆಸುತ್ತಿದ್ದು, ಇಲ್ಲಿರುವ ವಿದ್ಯಾರ್ಥಿನಿಯರ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ‌ ಪ್ರಿಯಾ ಭಗವಂತ ನಿಡಗುಂದಿ, ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿ ಅಮೋಘಾ ಚೌಗಲಾ ಯುಕ್ರೇನ್​ನಲ್ಲಿ ಸಿಲುಕಿರುವ ವಿದ್ಯಾರ್ಥಿನಿಯರು.

ಬೆಳಗಿನಿಂದ ಉಕ್ರೇನಿನ ಮೇಲೆ ರಷ್ಯಾ ಯುದ್ಧ ನಡೆಸುತ್ತಿದ್ದು, ವಿದ್ಯಾರ್ಥಿನಿಯರು ಭಯಗೊಂಡಿದ್ದಾರೆ. ಪ್ರಿಯಾ ನಿಡಗುಂದಿ ಹಾಗೂ ಅಮೋಘಾ ಚೌಗಲಾ ಉಕ್ರೇನಿನಲ್ಲಿ ವ್ಯಾಸಂಗ ಮಾಡುವ ಕಾಲೇಜಿನ ವಸತಿ ನಿಲಯದಲ್ಲಿದ್ದಾರೆ. ಯುದ್ಧ ಆರಂಭ ಹಿನ್ನೆಲೆ ಇಬ್ಬರು ಕುಟುಂಬಸ್ಥರ ಮನೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.


Spread the love

About Laxminews 24x7

Check Also

ನ.13 ರಂದೇ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ – ತೇಜಸ್ವಿ ಸೂರ್ಯ

Spread the loveಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಉದ್ಘಾಟನೆ ಕುರಿತು ಹೊಸ ಅಪ್ಡೇಟ್‌ ಬಂದಿದೆ. ಬೆಂಗಳೂರು ದಕ್ಷಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ