ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅಜೀಂ ಪ್ರೇಮ್‍ಜಿ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿಯಾಗಿ ಅಜೀಂ ಪ್ರೇಮ್‍ಜಿ ಹಾಗೂ ಪ್ರೆಸ್ ಕ್ಲಬ್ 2021 ವರ್ಷದ ವ್ಯಕ್ತಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಯನ್ನು ಪದ್ಮಶ್ರೀ ಹರೇಕಳ ಹಾಜಬ್ಬ, ನಟ ಕಿಚ್ಚ ಸುದೀಪ್, ಡಾ. ದೇವಿ ಪ್ರಸಾದ್ ಶೆಟ್ಟಿ, ಸಚಿವ ಡಾ.ಕೆ.ಸುಧಾಕರ್‍ಗೆ ನೀಡಲಾಯಿತು. ಇದೇ ವೇಳೆ, ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
https://twitter.com/drashwathcn/status/1496863505374670849/photo/1?ref_src=twsrc%5Etfw%7Ctwcamp%5Etweetembed%7Ctwterm%5E1496863505374670849%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fperson-of-the-year-award-for-yeddyurappa-and-azim-premji-by-press-club%2F