Breaking News

ಮದ್ಯಪ್ರಿಯರಿಗೆ ಅಬಕಾರಿ ಸಚಿವರಿಂದ ಗುಡ್ ನ್ಯೂಸ್ : ಸದ್ಯಕ್ಕೆ `ಎಣ್ಣೆ’ ದರ ಹೆಚ್ಚಳವಿಲ್ಲ

Spread the love

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ( Liquor Prices ) ಹೆಚ್ಚಳಕ್ಕೆ ಸರ್ಕಾರ ( Karnataka Government ) ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ( Minister K Gopalaiah ) ಹೇಳಿದ್ದಾರೆ.

2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು ಸಲಹೆ ಸೂಚನೆ ನೀಡಿದ್ದಾರಲ್ಲದೆ ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು.

 

ಶುಕ್ರವಾರ ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಮತ್ತು ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ಕಾರ್ಯಕ್ರ‌ಮದ‌ ಬಗ್ಗೆ ಚಿಂತನೆ ನಡೆಸಲಾಗುವುದು. ಇಲಾಖೆಯ ಕೆಲವು ಬೇಡಿಕೆಗಳ ಬಗ್ಗೆಯೂ ಸಿಎಂ ಗಮನ ಸೆಳೆಯುವ ಕೆಲಸ ಮಾಡಲಗಿದೆ.‌ಇದಕ್ಕೆ ಅವರು ಬಜೆಟ್ ನಲ್ಲಿ ಅಥವಾ ಆ ನಂತರ ಸೂಕ್ತ ವಾಗಿ ಸ್ಪಂದಿಸುವ ಭರವಸೆ ಇದೆ ಎಂದು ‌ಸಚಿವ ಕೆ.ಗೋಪಾಲಯ್ಯ ಸುದ್ದಿ ಗಾರರ ಪ್ರಶ್ನೆಗೆ ಉತ್ತರಿಸಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ