Breaking News

ಫೆ.26 ರಿಂದ ಶಿವಮೊಗ್ಗ ನಗರದಲ್ಲಿ ಶಾಲಾ-ಕಾಲೇಜು ಪುನಾರಂಭ

Spread the love

ಶಿವಮೊಗ್ಗ : ಫೆ.26 ರಿಂದ ಶಿವಮೊಗ್ಗ ನಗರದಲ್ಲಿ ಶಾಲಾ-ಕಾಲೇಜು ( Schools and Colleges ) ಆರಂಭವಾಗಲಿದೆ ಎಂದು ಶಿವಮೊಗ್ಗ ( Shivamogga ) ಜಿಲ್ಲಾ ಎಸ್ ಪಿ ಬಿ. ಎಂ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ.

 

ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ( Harsha Murder Case) ಹಿನ್ನೆಲೆ ಶಿವಮೊಗ್ಗದಲ್ಲಿ ಹಿಂದು ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ನಗರದಲ್ಲಿ ಭಾರೀ ಗಲಭೆಗೆ ಕಾರಣವಾಗಿತ್ತು. ಈ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ನಗರದಲ್ಲಿ ಗಲಭೆ ತಣ್ಣಗಾದ ಬಳಿಕ ಫೆ.26 ರಿಂದ ಶಿವಮೊಗ್ಗ ನಗರದಲ್ಲಿ ಶಾಲಾ-ಕಾಲೇಜು ಆರಂಭವಾಗಲಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.

ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಇನ್ನೂ, ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ( Harsha Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಪ್ರಕರಣ ಸಂಬಂಧ ಇದುವರೆಗೆ 8 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಬ್ಹುಲ್ ರೋಷನ್, ಜಾಫರ್ ಸಾಧಿಕ್ ಎಂದು ಗುರುತಿಸಲಾಗಿದೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗದಲ್ಲಿನ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ( Harsha Murder Case ) 8 ಆರೋಪಿಗಳನ್ನು ಬಂಧಿಸಲಾಗಿದ್ದು. . ಇಂದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಈಗ ಹರ್ಷ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.. ಪ್ರಕರಣ ಸಂಬಂಧ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ, ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಫೆ.26ರವರೆಗೆ ಮುಂದುವರೆಸಲಾಗಿದೆ.


Spread the love

About Laxminews 24x7

Check Also

ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಮದುವೆ; ಪತ್ನಿಗೆ ಚಾಕು ಇರಿದು ಕೊಂದ ಪತಿ

Spread the loveತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ