Breaking News

ಉಕ್ರೇನ್ ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ : ಸಿಎಂ ಬೊಮ್ಮಾಯಿ

Spread the love

ಬೆಂಗಳೂರು : ಉಕ್ರೇನ್ ನಲ್ಲಿರುವ ರಾಜ್ಯದ ( Karnataka ) ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕನ್ನಡಿಗರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ರಷ್ಯಾ ಮತ್ತು ಉಕ್ರೇನ್ (Russia-Ukraine war)​ ನಡುವೆ ನಡೆಯುತ್ತಿರುವ ಯುದ್ದ ಇದೀಗ ಭಾರತದಲ್ಲಿ ಆತಂಕ ಮೂಡಿಸಿದ್ದು, ಭಾರತದ ಅನೇಕ ಭಾರತೀಯರು ಉಕ್ರೇನ್​ನಲ್ಲಿ ಸಿಲುಕಿದ್ದಾರೆ. ಉಕ್ರೇನ್ ನಲ್ಲಿರುವ ಭಾರತೀಯರನ್ನು ಸುರಕ್ಷಿಗತವಾಗಿ ಕರೆತರಲು ಸರ್ಕಾರ ಸಿದ್ದತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಅದರಲ್ಲಿ ರಾಜ್ಯದ 10ಕ್ಕೂ ಅಧಿಕ ವಿದ್ಯಾರ್ಥಿಗಳು (Karnataka Student) ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ. ಇದರಿಂದ ಪೋಷಕರು ಆತಂಕಗೊಂಡಿದ್ದಾರೆ. ವಿದ್ಯಾಭ್ಯಾಸಕ್ಕಾಗಿ ತೆರಳಿದ ಮಕ್ಕಳು ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರಕ್ಕೂ ಪೋಷಕರು ಮನವಿ ಮಾಡಿದ್ದು, ಮಕ್ಕಳ ಕರೆತರಲು ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದೆ. ಇನ್ನು ಉಕ್ರೇನ್​ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕನ್ನಡಿಗರ ಬಗ್ಗೆ ಸಂಪೂ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿದ ಕನ್ನಡಿಗರ ನೆರವಿಗಾಗಿ ರಾಜ್ಯ ಸರ್ಕಾರ ದಿಂದ ಸಹಾಯವಾಣಿ ಆರಂಭಿಸಲಾಗಿದ್ದು, ಸಹಾಯ ಪಡೆಯಲು ಸರ್ಕಾರ ತಿಳಿಸಿದೆ.ನೆರವಿಗಾಗಿ ಸರ್ಕಾರದ 24×7 ಗಂಟೆ ಸಹಾಯವಾಣಿ ಸಂಖ್ಯೆ 080-1070. 080-22340676 ಅಥವಾ ಇ ಮೇಲ್ ಐಡಿ manoarya@gmail.com ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ