ಲಕ್ನೋ: ಉತ್ತರ ಪ್ರದೇಶದ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಸರ್ಕಾರಗಳು 10 ವರ್ಷಗಳಲ್ಲಿ ಕೇವಲ ಎರಡು ಲಕ್ಷ ಜನರಿಗೆ ಸರ್ಕಾರಿ ಉದ್ಯೋಗಗಳನ್ನು ನೀಡಿದೆ. ಆದರೆ ಯೋಗಿ ಆದಿತ್ಯನಾಥ್ ಸರ್ಕಾರ ಐದು ವರ್ಷಗಳಲ್ಲಿ ಐದು ಲಕ್ಷ ಮಂದಿಗೆ ಉದ್ಯೋಗ ನೀಡಿದೆ ಎಂದು ವಿರೋಧ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.
ಪ್ರಯಾಗ್‍ರಾಜ್ ರ್‍ಯಾಲಿಯನ್ನುದ್ದೇಶಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಮತ್ತೆ ಉದ್ಯೋಗದ ಹೆಸರಿನಲ್ಲಿ ರಾಜ್ಯದ ಯುವಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಿಜವಾಗಿ ಹೇಳಬೇಕೆಂದರೆ ಅವರು 10 ವರ್ಷಗಳಲ್ಲಿ ಕೇವಲ ಎರಡು ಲಕ್ಷ ಜನರಿಗೆ ಸರ್ಕಾರಿ ಉದ್ಯೋಗಗಳನ್ನು ನೀಡಿದ್ದಾರೆ. ಅದು ಕೂಡ ಸ್ವಜನಪಕ್ಷಪಾತ (ಭಾಯಿ-ಭಟಿಜವಾದ್), ಜಾತಿವಾದ ಮತ್ತು ಭ್ರಷ್ಟಾಚಾರದ ಆಧಾರದ ಮೇಲೆ ಎಂದು ಕಿಡಿಕಾರಿದ್ದಾರೆ.