ವಾಶಿಂಗ್ಟನ್, ಫೆಬ್ರವರಿ 25: ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ಸೇನಾ ಕಾರ್ಯಾಚರಣೆ ಕುರಿತು ಭಾರತದ ಜೊತೆಗೆ ಯುನೈಟೆಡ್ ಸ್ಟೇಟ್ಸ್ ಸಮಾಲೋಚನೆ ನಡೆಸುತ್ತಿದೆ ಎಂದು ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.
ಉಕ್ರೇನ್‌ನಲ್ಲಿ ಯುದ್ಧ ಘೋಷಿಸುವ ಕುರಿತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ದೂರದರ್ಶನದಲ್ಲಿ ಸ್ಪಷ್ಟಪಡಿಸಿದ್ದರು.
“ನಾನು ಸೇನಾ ಕಾರ್ಯಾಚರಣೆ ನಡೆಸಲು ನಿರ್ಧಾರ ತೆಗೆದುಕೊಂಡಿದ್ದೇನೆ,” ಎಂದು ಅವರು ಮಾಸ್ಕೋದಲ್ಲಿ ಬೆಳಗ್ಗೆ 6 ಗಂಟೆ ಸುಮಾರಿಗೆ ಪ್ರಕಟಣೆ ಹೊರಡಿಸಿದ್ದರು. ಇದೇ ವೇಳೆ ರಷ್ಯಾದ ಸೇನಾ ಕಾರ್ಯಾಚರಣೆಯಲ್ಲಿ ಯಾರಾದರೂ ಮಧ್ಯಪ್ರವೇಶ ಮಾಡಿದರೆ, ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಬೇಕಾಗುತ್ತದೆ. ಮಧ್ಯಪ್ರವೇಶ ಮಾಡಿದವರು ಎಂದೂ ನೋಡದ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.