Breaking News

ಬಂಕರ್‌ಗಳಲ್ಲಿ ಕೂತು ಪ್ರಾಣ ರಕ್ಷಣೆಗೆ ಮುಂದಾದ ಬೆಳಗಾವಿಯ ಏಳು ವಿದ್ಯಾರ್ಥಿಗಳು

Spread the love

ಬೆಳಗಾವಿ: ಉಕ್ರೇನ್‍ನ ಕಾರ್ಕಿವ್ ನ್ಯಾಷನಲ್ ಮೆಡಿಕಲ್ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಗಡಿ ಜಿಲ್ಲೆ ಬೆಳಗಾವಿಯ ಏಳು ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದು, ತಾವು ವಾಸವಿದ್ದ ಹಾಸ್ಟೆಲ್‍ನ ನೆಲಮಹಡಿ ಮತ್ತು ಬಂಕರ್‌ಗಳಲ್ಲಿ ರಕ್ಷಣೆ ಪಡೆದಿದ್ದಾರೆ

ಬೆಳಗಾವಿ ಜಿಲ್ಲೆಯ ಪ್ರಿಯಾ ಚಬ್ಬಿ, ಪ್ರೀತಿ ಚಬ್ಬಿ, ಶ್ರೇಯಾ ಹೆರಕಲ್, ಅಮೋಘ ಚೌಗಲಾ, ಪ್ರಿಯಾ ನಿಡಗುಂದಿ, ರಕ್ಷಿತ್ ಗಣಿ, ಅಫ್ರೀನ್ ಮದರಸಾಬ್ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ವಿದ್ಯಾರ್ಥಿಗಳ ಪೋಷಕರ ಜೊತೆಗೆ ಬೆಳಗಾವಿ ಜಿಲ್ಲಾಡಳಿತ ಸಂಪರ್ಕದಲ್ಲಿದೆ. ಸದ್ಯಕ್ಕೆ ಇಬ್ಬರು ವಿದ್ಯಾರ್ಥಿನಿಯರ ಪೋಷಕರ ಜೊತೆ ಬೆಳಗಾವಿ ಡಿಸಿ ಮಾತುಕತೆ ನಡೆಸಿದ್ದಾರೆ. ಉಳಿದ ವಿದ್ಯಾರ್ಥಿಗಳ ಬಗ್ಗೆಯೂ ಜಿಲ್ಲಾಡಳಿತ ಮಾಹಿತಿ ಕಲೆ ಹಾಕುತ್ತಿದೆ. ನೆಲಮಹಡಿ, ಬಂಕರ್‍ಗಳಲ್ಲೇ ವಿದ್ಯಾರ್ಥಿಗಳು ಮೊಬೈಲ್ ಚಾರ್ಜ್ ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳ ಸ್ಥಿತಿ ಕಂಡು ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.


Spread the love

About Laxminews 24x7

Check Also

ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಮದುವೆ; ಪತ್ನಿಗೆ ಚಾಕು ಇರಿದು ಕೊಂದ ಪತಿ

Spread the loveತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ