ಚಿಕ್ಕೋಡಿ: ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.
ಸಂಕೇಶ್ವರ ಪಟ್ಟಣದ ನಿವಾಸಿಗಳಾದ ಬಸವರಾಜ ಮಾಳಿ(29), ಪ್ರವೀಣ್ ಸನದಿ(26), ಮೆಹಬೂಬ ಶೇಗಡಿ(21), ಮಲಿಕ್ ಜಮಾದಾರ್(21) ಮೃತ ದುರ್ದೈವಿಗಳಾಗಿದ್ದಾರೆ.
ಗುರುವಾರ ತಡರಾತ್ರಿ ಒಂದೇ ಬೈಕಿನಲ್ಲಿ ನಾಲ್ವರು ಯುವಕರು ಮಹಾರಾಷ್ಟ್ರದ ಗಡಹಿಂಗ್ಲಜ್ ರಸ್ತೆ ಮಾರ್ಗದಿಂದ ಸಂಕೇಶ್ವರ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಪಕ್ಕದ ಗುಂಡಿಗೆ ನಾಲ್ವರು ಬಿದ್ದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದಾರೆ.