Breaking News

ಉಕ್ರೇನ್​​ನಿಂದ ವಾಪಸ್​ ಆದ ಜಾನ್ಹವಿ.. ಅಲ್ಲಿನ ಭೀಕರತೆ ಬಗ್ಗೆ ವಿವರಿಸಿದ್ದು ಹೀಗೆ..

Spread the love

ರಷ್ಯಾ–ಉಕ್ರೇನ್​ ಮಧ್ಯೆ ಸಂಘರ್ಷ ಮುಂದುವರೆದಿದೆ. ಇದರ ಮಧ್ಯೆ ಎರಡು ದೇಶಗಳಲ್ಲಿ ಭಾರತದ ಸಾವಿರಾರು ವಿದ್ಯಾರ್ಥಿಗಳು ಸಿಲುಕಿದ್ದಾರೆ. ತಾವು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ಈಗಾಗಲೇ ಅನೇಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇದರ ಮಧ್ಯೆ ಉಕ್ರೇನ್​​ನಿಂದ ಭಾರತಕ್ಕೆ ವಾಪಸ್​ ಆಗಿರುವ ಜಾನ್ಹವಿ, ಅಲ್ಲಿನ ಭೀಕರತೆ ಬಗ್ಗೆ ವಿವರಿಸಿದ್ದಾರೆ.

ಉಕ್ರೇನ್​ ವಿರುದ್ಧ ರಷ್ಯಾ ಮಿಲಿಟರಿ ಕಾರ್ಯಾಚರಣೆ ಆರಂಭ ಮಾಡುವುದಕ್ಕೂ ಕೆಲ ದಿನ ಮುಂಚೆ ಭಾರತಕ್ಕೆ ವಾಪಸ್​ ಆಗಿರುವ ಜಾನ್ಹವಿ ಖುರಾನಾ, ಅಲ್ಲಿನ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದು, ದಿನದಿಂದ ದಿನಕ್ಕೆ ಉಕ್ರೇನ್​ ಪರಿಸ್ಥಿತಿ ಹದಗೆಡುತ್ತಿದೆ ಎಂದಿದ್ದಾರೆ. ತಾವು ಭಾರತಕ್ಕೆ ಬರುವ ಸಂದರ್ಭದಲ್ಲಿ ವಿಮಾನಯಾನ ಸೇವೆ ಪ್ರಾರಂಭವಾಗಿತ್ತು.

ಆದರೆ, ಇದೀಗ ಅದು ಸಂಪೂರ್ಣವಾಗಿ ಬಂದ್​ ಆಗಿದ್ದು, ಅನೇಕ ಭಾರತೀಯ ವಿದ್ಯಾರ್ಥಿಗಳು ಅಲ್ಲಿ ಸಿಲುಕಿಕೊಂಡಿದ್ದಾರೆ. ಸಂಕಷ್ಟಕ್ಕೊಳಗಾಗಿದ್ದಾರೆಂದು ತಿಳಿಸಿದ್ದಾರೆ. ಕಳೆದ ಕೆಲ ದಿನಗಳಿಗೆ ಹೋಲಿಕೆ ಮಾಡಿದಾಗ ಉಕ್ರೇನ್​ ಪರಿಸ್ಥಿತಿ ಇದೀಗ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ಎಂದಿದ್ದಾರೆ.


Spread the love

About Laxminews 24x7

Check Also

ಇದೇ ೧೧ ರಂದು ಬೆಳಗಾವಿಯಲ್ಲಿ ಬಸವ ಸಂಸ್ಕೃತಿ ಅಭಿಯಾನ

Spread the love ಬೆಳಗಾವಿ: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ಸರ್ಕಾರ “ಸಾಂಸ್ಕೃತಿಕ ನಾಯಕ”ನೆಂದು ಘೋಷಿಸಿದ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ