Breaking News

ಇಂದು ಉಕ್ರೇನ್ ನಿಂದ 480 ಭಾರತೀಯರ ಏರ್ ಲಿಫ್ಟ್

Spread the love

ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ ಮೂರನೇ ದಿನವೂ ಮುಂದುವರೆದಿದ್ದು, ಈ ನಡುವೆ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಇಂದು ರಾತ್ರಿಯಿಂದ ಭಾರತೀಯರನ್ನು ಮರಳಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇಂದು 480 ಭಾರತೀಯರ ಏರ್ ಲಿಫ್ಟ್ ಮಾಡಲಾಗುತ್ತಿದೆ

ಇಂದು ರಾತ್ರಿ ರೊಮಾನಿಯಾದ ಬುಕಾರೆಸ್ಟ್ ಗೆ ಎರಡು ವಿಮಾನಗಳು ತೆರಳಲಿದ್ದು, ಮತ್ತೊಂದು ವಿಮಾನ ಹಂಗೇರಿಯಾದ ಬುಡಾಪೆಸ್ಟ್ ಗೆ ತೆರಳಲಿದೆ.

 

ಒಟ್ಟು ಮೂರು ವಿಮಾನಗಳ ಮೂಲಕ ಭಾರತೀಯರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. ವಿಮಾನ ಪ್ರಯಾಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸುತ್ತಿದ್ದು, ಉಚಿತವಾಗಿ ಭಾರತೀಯರನ್ನು ಉಕ್ರೇನ್ ನಿಂದ ಏರ್ ಲಿಫ್ಟ್ ಮಾಡಲಾಗುತ್ತಿದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ