ಬೆಂಗಳೂರು: ಎಸಿಬಿ ಪತ್ತೆ ಮಾಡಿರುವ ಬಿಬಿಎಂಪಿಯ ಅಕ್ರಮಗಳಲ್ಲಿ ಪ್ರಭಾವಿ ಸಚಿವರು ಹಾಗೂ ಬೆಂಗಳೂರಿನ ಶಾಸಕರುಗಳ ಪಾತ್ರ ಮಹತ್ವದ್ದಾಗಿದೆ. ಇಲ್ಲಿ ಕೇವಲ ಅಧಿಕಾರಿಗಳನ್ನು ಬಲಿಪಶು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಕಿಡಿಕಾರಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಟಿ.ನಾಗಣ್ಣ ಅವರು, ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ 27 ಕಚೇರಿಗಳ ಮೇಲೆ ದಾಳಿ ಮಾಡಿ, ಸುಮಾರು 300 ಕೋಟಿ ರೂ. ಗಿಂತಲೂ ಹೆಚ್ಚಿನ ಮೊತ್ತದ ಹಲವು ಅಕ್ರಮಗಳನ್ನು ಬಯಲು ಮಾಡಿರುವುದು ಶ್ಲಾಘನೀಯ. ಆದರೆ ಈ ಎಲ್ಲ ಅಕ್ರಮಗಳು ಬೆಂಗಳೂರಿನ ಶಾಸಕರು ಹಾಗೂ ಸಚಿವರ ಅಣತಿಯ ಮೇರೆಗೆ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು