Breaking News

ಉಕ್ರೇನ್‍ನಲ್ಲಿ ಬೆಳಗಾವಿ ಯೋಧನ ಪುತ್ರಿ – ಮಗಳನ್ನು ರಕ್ಷಿಸುವಂತೆ ಪ್ರಧಾನಿ ಕೋರಿದ ಸೈನಿಕ

Spread the love

ಬೆಳಗಾವಿ: ಉಕ್ರೇನ್‌ನಲ್ಲಿ ಬೆಳಗಾವಿ ಯೋಧರೊಬ್ಬರ ಪುತ್ರಿ ಸಿಲುಕಿಕೊಂಡು ಪರದಾಡುತ್ತಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಹೀಗಾಗಿ ಮಗಳನ್ನ ರಕ್ಷಿಸುವಂತೆ ಪ್ರಧಾನಿ ಮೋದಿಗೆ ಯೋಧ ಮನವಿ ಮಾಡಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ ಫಾಲ್ಸ್‌ನ ನಿವಾಸಿ ರಜೀಯಾ ಬಾಗಿ ಉಕ್ರೇನ್‍ನಲ್ಲಿ ಎಂಬಿಬಿಎಸ್ ದ್ವೀತಿಯ ವರ್ಷದ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಉಕ್ರೇನಿನಲ್ಲಿ ಸಿಲುಕಿರುವ ಮಗಳನ್ನು ರಕ್ಷಿಸುವಂತೆ ಪ್ರಧಾನಿಗೆ ಸೈನಿಕ ಮನವಿ ಮಾಡಿದ್ದಾರೆ.ವಿದ್ಯಾರ್ಥಿನಿ ರಜೀಯಾ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ನಮ್ಮನ್ನು ಆದಷ್ಟು ಬೇಗ ಸ್ಥಳಾಂತರ ಮಾಡಬೇಕು. ಉಕ್ರೇನ್ ಬಾರ್ಡರ್ ಕ್ರಾಸ್ ಆಗೋವರೆಗೂ ಏನಾದರೂ ಪರ್ಯಾಯ ವ್ಯವಸ್ಥೆ ಕಲ್ಪಸಬೇಕು. ಸದ್ಯ ನಮಗೆ ನೀರು, ಆಹಾರ ಸರಬರಾಜು ಆಗುತ್ತಿಲ್ಲ. ದಯವಿಟ್ಟು ನಮ್ಮನ್ನು ಕಾಪಾಡವಂತೆ ವಿದ್ಯಾರ್ಥಿನಿ ತನ್ನ ತಂದೆಗೆ ಕಳಿಸಿರೋ ವೀಡಿಯೋ ಸಂದೇಶದಲ್ಲಿ ಅಳಲು ತೋಡಿಕೊಂಡಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ