Breaking News

ಲಾರಿ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೆ ಗಂಭೀರ ಗಾಯ

Spread the love

ಹುಬ್ಬಳ್ಳಿ: ಲಾರಿ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಘಟಗಿ ತಾಲೂಕಿನ ಸಲಕಿನಕೊಪ್ಪ ಕ್ರಾಸ್ ಬಳಿ ನಡೆದಿದೆ.

ದಾಂಡೇಲಿಯಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಕಾರಿನಲ್ಲಿ ಒಂದು ವರ್ಷದ ಮಗು ಸೇರಿದಂತೆ ನಾಲ್ಕು ಜನರಿದ್ದರು. ಅಲ್ಲದೇ ವ್ಯಕ್ತಿಯೊಬ್ಬರು ಸಾವು ಬದುಕಿನ ಮಧ್ಯ ಹೋರಾಟ ನಡೆಸುತ್ತಿದ್ದು, ಸ್ಥಳಕ್ಕೆ ದೌಡಾಯಿಸಿದ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುದರ್ಶನ್ (44), ಬಸವರಾಜ್ (30), ರಾಜಲಕ್ಷ್ಮಿ (29), ರವಿ ಶರ್ಮ (65) ಅಪಘಾತದಲ್ಲಿ ಗಾಯಗೊಂಡವರು. ಅಂಬುಲೆನ್ಸ್ ಚಾಲಕ ಕುಮಾರಸ್ವಾಮಿ ಹಾಗೂ ಮೆಡಿಕಲ್ ಟೆಕ್ನಿಷಿಯನ್ ವಿರುಪಾಕ್ಷ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the loveಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ