Breaking News

ಡಬಲ್ ಇಂಜಿನ್ ಸರ್ಕಾರವಿದ್ದರೂ, ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ: ಸಿದ್ದು ವ್ಯಂಗ್ಯ

Spread the love

ರಾಮನಗರ: ಬಿಜೆಪಿ ಅವರು ನಮ್ಮದು ಡಬಲ್ ಇಂಜಿನ್ ಸರ್ಕಾರ ಅಂತಾರೆ. ಆದರೂ ಕೂಡ ಯೋಜನೆ ಮಾಡಲೂ ಸಾಧ್ಯವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್‍ನಿಂದ ಮೂರನೇ ಅಲೆ ಪಾದಯಾತ್ರೆ ಸ್ಥಗಿತವಾಗಿತ್ತು. ರಾಜ್ಯದ ಹಿತ, ಆರೋಗ್ಯದ ದೃಷ್ಟಿಯಿಂದ ಪಾದಯಾತ್ರೆ ಮೊಟಕುಗೊಳಿಸಲು ತೀರ್ಮಾನಿಸಲಾಗಿತ್ತು. ಮತ್ತೇ ಕೋವಿಡ್ ಕಡಿಮೆಯಾದ ಹಿನ್ನೆಲೆ ಪಾದಯಾತ್ರೆ ಮುಂದುವರಿಸುತ್ತಿದ್ದೇವೆ. ಇಂದಿನಿಂದ ಐದು ದಿನಗಳ ಕಾಲ ಪಾದಯಾತ್ರೆ ನಡೆಯುತ್ತದೆ. ಪಾದಯಾತ್ರೆಗೆ ಚಾಲನೆ ಕೊಟ್ಟ ಸುರ್ಜೇವಾಲಾ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದರು.ನಮ್ಮ ಅಧಿಕಾರ ಅವಧಿಯಲ್ಲಿ ಡಿಪಿಆರ್ ತಯಾರಿಸಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಐದು ವರ್ಷ ಏನೂ ಮಾಡಿಲ್ಲ, ಕಾಲಹರಣ ಮಾಡಿದರೂ ಅಂತಾ ಸುಳ್ಳು ಜಾಹೀರಾತು ಕೊಡ್ತಿದ್ದಾರೆ. ಇದೆಲ್ಲ ನೂರಕ್ಕೆ ನೂರು ಸುಳ್ಳು ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ