ಬೆಳಗಾವಿ: ಯುದ್ಧಪೀಡಿತ ಉಕ್ರೇನ್‍ನಿಂದ ಬೆಳಗಾವಿಯ ಎಂಬಿಬಿಎಸ್ ವಿದ್ಯಾರ್ಥಿನಿ ಫೈಜಾ ಸುಬೇದಾರ್ ಸುರಕ್ಷಿತವಾಗಿ ಆಗಮಿಸಿದ್ದು, ಕುಟುಂಬಸ್ಥರಲ್ಲಿ ಸಂಭ್ರಮ ಮನೆಮಾಡಿದೆ.
ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಫೈಜಾ ಸುಬೇದಾರ್ ವಿದ್ಯಾರ್ಥಿನಿಯನ್ನು ಅಂಬೇಡ್ಕರ್ ಜನಜಾಗೃತಿ ವೇದಿಕೆಯಿಂದ ಸ್ವಾಗತಿಸಿಕೊಳ್ಳಲಾಯಿತು. ಮಗಳು ಸುರಕ್ಷಿತವಾಗಿ ಮರಳಿದ ಹಿನ್ನೆಲೆ ಕುಟುಂಬಸ್ಥರಲ್ಲಿಯೂ ಸಂಭ್ರಮ ಮನೆಮಾಡಿತು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಫೈಜಾ, ನಾವು ರೊಮೇನಿಯಾ ಗಡಿಗೆ ಬಂದು ಅಲ್ಲಿಂದ 12 ಗಂಟೆ ಪ್ರಯಾಣ ಮಾಡಿ ಏರ್‍ಪೆÇೀರ್ಟ್ ತಲುಪಿದ್ವಿ. ನಾವು ಉಕ್ರೇನ್ ಪಶ್ಚಿಮ ಭಾಗದಲ್ಲಿ ಇದ್ವಿ. ಅಲ್ಲಿ ಅಷ್ಟೊಂದು ತೊಂದರೆ ಇರಲಿಲ್ಲ. ನಮ್ಮ ಭಾರತ ಸರ್ಕಾರದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಸಂತೋಷ ವ್ಯಕ್ತಪಡಿಸಿದರು.
ನಾವು ವಾಪಾಸ್ ಆಗಿರುವುದು ಬಹಳ ಸಂತೋಷ ಆಗ್ತಿದೆ. ಇದಕ್ಕೆ ಕಾರಣವಾದ ಪ್ರಧಾನಿ ಮೋದಿ ಅವರಿಗೂ ಧನ್ಯವಾದ ತಿಳಿಸುತ್ತೇನೆ. ಯುದ್ದ ಆರಂಭವಾದಾಗ ನಮಗೆ ಬಹಳ ಭಯ ಅನಿಸಿತ್ತು. ನಾನು ವೆಸ್ಟರ್ನ್ ಉಕ್ರೇನ್‍ದಲ್ಲಿದ್ದೆ. ಅಲ್ಲಿ ಯುದ್ಧದ ಭೀತಿ ಇರಲಿಲ್ಲ. ಏಕಾಏಕಿ ಯುದ್ದ ಆರಂಭವಾಗಿದನ್ನು ಕೇಳಿ ಶಾಕ್ ಆಯ್ತು. ಬೆಳಂಬೆಳಗ್ಗೆ ಐದು ಗಂಟೆಗೆ ಯುದ್ಧ ಆರಂಭವಾದ ಸುದ್ದಿ ತಿಳಿಯಿತು. ಯಾರು ಕೂಡ ರಷ್ಯಾ ಯುದ್ಧ ಮಾಡುತ್ತೆ ಎಂದು ಊಹೆಯನ್ನೂ ಸಹ ಮಾಡಿಕೊಂಡಿರಲಿಲ್ಲ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.