Breaking News

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ- ಇಂದು ಬಿಡದಿಯಿಂದ ಮತ್ತೆ ಆರಂಭ

Spread the love

ಬೆಂಗಳೂರು: ಮೇಕೆದಾಟು ಆಣೆಕಟ್ಟು ಯೋಜನೆ ಕಾಮಗಾರಿಗೆ ಒತ್ತಾಯಿಸಿ ನೀರಿಗಾಗಿ ನಡಿಗೆ ಹೆಸರಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಗೆ ಇಂದು 2ನೇ ದಿನ.

ಇಂದು ಬೆಳಗ್ಗೆ ಬಿಡದಿಯಿಂದ ಪಾದಯಾತ್ರೆ ಶುರುವಾಗಲಿದೆ. ನಿನ್ನೆಯಷ್ಟೇ ಕನಕಪುರ ಸರ್ಕಲ್‍ನಲ್ಲಿ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಉಸ್ತುವಾರಿ ಸುರ್ಜೆವಾಲಾ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತಿತರ ಮುಖಂಡರು ಚಾಲನೆ ನೀಡಿದ್ರು. ನಟ ನೆನಪಿರಲಿ ಪ್ರೇಮ್, ಸಾಧುಕೋಕಿಲಾ ಕೂಡ ಪಾಲ್ಗೊಂಡಿದ್ರು.ರಾಮನಗರದಿಂದ ಹೊರಟ ಪಾದಯಾತ್ರೆ ಸದ್ಯ ಬಿಡದಿ ತಲುಪಿದೆ. ಮತ್ತೊಂದೆಡೆ ಬೆಂಗಳೂರಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಸರ್ಕಾರ ಷರತ್ತು ವಿಧಿಸಬಹುದು ಎನ್ನಲಾಗ್ತಿದೆ. ಪಾದಯಾತ್ರೆಗೆ ಅನುಮತಿ ಪಡೆಯದ ಕಾಂಗ್ರೆಸ್‍ಗೆ ಇಂತದೊಂದು ಆತಂಕ ಎದುರಾಗಿದೆ. ಕೇವಲ ಪಾದಯಾತ್ರೆ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ನಾಯಕರಿಗೆ ಈ ಬಾರಿಯು ಕೊನೆಗಳಿಗೆಯ ತೊಡಕಿನ ಆತಂಕ ಎದುರಾಗಿದೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ