Breaking News

ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭ

Spread the love

ಶಿವಮೊಗ್ಗ: ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿದೆ.

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ನಿಷೇಧಾಜ್ಞೆ ಹೇರಿ ನಗರ ವ್ಯಾಪ್ತಿಯ ಸ್ಕೂಲ್-ಕಾಲೇಜು ಬಂದ್ ಮಾಡಲಾಗಿತ್ತು. ಆದರೆ ಇದೀಗ ಮಾರ್ಚ್ 4ರವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಅದರಂತೆ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಹಾಗೂ ಸಂಜೆ 7 ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಸ್ಕೂಲ್-ಕಾಲೇಜು ಎಂದಿನಂತೆ ಆರಂಭಗೊಳ್ಳಲಿದೆ. ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮುಂದುವರಿಕೆಯಾಗಲಿದ್ದು, ಇದರಿಂದ ವರ್ತಕರು, ನಿರಾಳರಾದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ