Breaking News

ಡಿಕೆಶಿ, ಸಿದ್ದರಾಮಯ್ಯ ಸಿಎಂ ಆಗೋ ಕನಸಿನ ಲೋಕದಲ್ಲಿದ್ದಾರೆ: ಕೆ.ಎಸ್ ಈಶ್ವರಪ್ಪ

Spread the love

ರಾಯಚೂರು: ಹಿಜಬ್ ವಿವಾದದಿಂದ ಕಾಂಗ್ರೆಸ್‍ನವರು ಮುಸ್ಲಿಂ ಓಟು ಪಡೆಯುವ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಹಿಜಬ್ ಪರ ಮಾತನಾಡುತ್ತಾರೆ. ಅವರಲ್ಲೇ ಎರಡು ಗುಂಪು ಗಳಾಗಿವೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸಿಎಂ ಆಗುವ ಕನಸಿನ ಲೋಕದಲ್ಲಿದ್ದಾರೆ ಅಂತ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ರಾಯಚೂರಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯು.ಟಿ.ಖಾದರ್ ಮತ್ತು ಕೆಲವು ಶಾಸಕರು ಹಿಜಬ್ ವಿವಾದದ ಹಿಂದೆ ಎಸ್‍ಡಿಪಿಐ, ಪಿಎಫ್‍ಐ ಕೈವಾಡವಿದ್ದು, ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸುತ್ತಾರೆ ಎಂದಿದ್ದಾರೆ.

ಗೋವಾ ಚುನಾವಣೆ ವೇಳೆ ಕರ್ನಾಟಕಕ್ಕೆ ಹನಿ ನೀರು ಕೊಡಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಇಲ್ಲಿ ಮಹಾದಾಯಿ, ಮೇಕೆದಾಟು ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಹೋರಾಟ ನಡೆಸುವ ಮೂಲಕ ದ್ವಂದ್ವ ನಿಲುವು ಪ್ರದರ್ಶಿಸುತ್ತಾರೆ. ಮಾಡಲು ಕೆಲಸವಿಲ್ಲದೇ ಕಾಂಗ್ರೆಸ್ ನವರು ಪಾದಯಾತ್ರೆ ಮಾಡುತ್ತಿದ್ದಾರೆ. ಈಗಾಗಲೇ ಒಂದು ಹಂತದ ಹೋರಾಟ ಮಾಡಿದ್ದಾಗಿ ಹೇಳಿದ್ದಾರೆ. ಈಗ ಮತ್ತೇ ಪಾರ್ಟ್-2 ನಾಟಕ ಶುರು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ