ಪುನೀತ್ ರಾಜ್ಕುಮಾರ್ (Puneeth Rajkumar) ಅಭಿಮಾನಿಗಳಿಗೆ ಇಂದು (ಮಾರ್ಚ್ 1) ವಿಶೇಷ ದಿನ.
ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ಜೇಮ್ಸ್’ನ (James Movie) ಲಿರಿಕಲ್ ಸಾಂಗ್, ‘ಟ್ರೇಡ್ಮಾರ್ಕ್..’ (Trademark Song) ಬೆಳಗ್ಗೆ 11:11ಕ್ಕೆ ರಿಲೀಸ್ ಆಗುತ್ತಿದೆ. ಈ ವಿಚಾರವನ್ನು ಈ ಮೊದಲು ಚಿತ್ರತಂಡ ಘೋಷಣೆ ಮಾಡಿತ್ತು. ಹೀಗಾಗಿ, ಅಭಿಮಾನಿಗಳು ಈ ಸಾಂಗ್ ಕೇಳೋಕೆ ಕಾದು ಕೂತಿದ್ದಾರೆ. ಈಗಾಗಲೇಟೀಸರ್ ಮೂಲಕ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗ ಚಿತ್ರದ ಹಾಡು ಹೇಗಿರಲಿದೆ ಎಂಬುದನ್ನು ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.
ಲಿರಿಕಲ್ ಸಾಂಗ್ ರಿಲೀಸ್ ಮಾಡುವಾಗ ಅದಕ್ಕೊಂದು ಸಿದ್ಧಸೂತ್ರವಿದೆ. ಸಿನಿಮಾದ ಸ್ಟಿಲ್ಗಳನ್ನು ಹಾಕಿ, ಬ್ಯಾಕ್ಗ್ರೌಂಡ್ನಲ್ಲಿ ಸಾಂಗ್ ಹಾಕಲಾಗುತ್ತದೆ. ಬಹುತೇಕರು ಹೀಗೆಯೇ ಮಾಡುತ್ತಾರೆ. ಆದರೆ, ‘ಟ್ರೇಡ್ಮಾರ್ಕ್’ ಲಿರಿಕಲ್ ಸಾಂಗ್ ಆ ರೀತಿಯಲ್ಲಿ ಇರುವುದಿಲ್ಲ ಎಂಬುದನ್ನು ಇತ್ತೀಚೆಗೆ ಚೇತನ್ ಕುಮಾರ್ ಹೇಳಿದ್ದರು. ‘ಟ್ರೇಡ್ಮಾರ್ಕ್ ಸಾಂಗ್ಅನ್ನು 5 ಗಾಯಕರು ಹಾಡಿದ್ದಾರೆ. ಫೋಟೋ ಮೇಲೆ ಲಿರಿಕ್ಸ್ ಹಾಕಿ ರಿಲೀಸ್ ಮಾಡುವ ಹಾಗೆ ರೆಗ್ಯುಲರ್ ಆಗಿ ಇದನ್ನು ಬಿಡುಗಡೆ ಮಾಡಲ್ಲ. ತುಂಬ ವಿಶೇಷವಾದ ಕಲಾವಿದರು ಇದರಲ್ಲಿ ಪರ್ಫಾರ್ಮ್ ಮಾಡಿದ್ದಾರೆ. ಅದರ ಜೊತೆಗೆ ಮೇಕಿಂಗ್ ವಿಡಿಯೋ ಕೂಡ ಇರಲಿದೆ. ಮಾ.1ರಂದು ಎಲ್ಲ ಮಾಹಿತಿ ತಿಳಿಯಲಿದೆ. ಇ
Laxmi News 24×7