Breaking News

ಬೈಲಹೊಂಗಲ ಬಳಿ ಬೈಕ್​ಗಳ ಮಧ್ಯೆ ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ

Spread the love

ಬೆಳಗಾವಿ: ಬೈಕ್​​ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಬಳಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಮುಗುಟಸಾಬ್ ನದಾಪ್(25), ಸಂಗೊಳ್ಳಿ ಗ್ರಾಮದ ಪ್ರಸಾದ್ ವಕ್ಕುಂಡಮಠ(18) ಮೃತ ದುರ್ದೈವಿಗಳು. ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ