Breaking News

ಉಕ್ರೇನ್​​ನಿಂದ ಬೆಂಗಳೂರಿಗೆ‌ ಆಗಮಿಸಿದ ಐವರು ವಿದ್ಯಾರ್ಥಿಗಳು.. ಸರ್ಕಾರಕ್ಕೆ ಥ್ಯಾಂಕ್ಸ್​ ಹೇಳಿದ ಸ್ಟುಡೆಂಟ್ಸ್​​

Spread the love

ದೇವನಹಳ್ಳಿ(ಬೆಂಗಳೂರು): ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದೆ. ಉಕ್ರೇನ್​ನಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಅಲ್ಲಿಂದ ಅವರನ್ನು ಮರಳಿ ದೇಶಕ್ಕೆ ಕರೆತರುವ ಕೆಲಸ ಆಗುತ್ತಿದೆ. ಅದರಂತೆ ಐವರು ವಿದ್ಯಾರ್ಥಿಗಳು ಉಕ್ರೇನ್​ನಿಂದ ದೆಹಲಿಗೆ ಬಂದು, ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ನಿನ್ನೆ ರಾತ್ರಿ 8 ಗಂಟೆಗೆ ಆಗಮಿಸಿದ್ದಾರೆ.

ಸೋಮವಾರ ರಾತ್ರಿ 5 ವಿದ್ಯಾರ್ಥಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿದ್ಯಾರ್ಥಿಗಳಾದ ಶ್ರವಣ ಸಂಗಣ್ಣ, ಶಕ್ತಿಶ್ರೀ ಶೇಖರ್, ಮೈನಾ ಅನಿಲ್​​ ನಾಯಕ್, ನಿಹಾರಿಕಾ, ಆಶಾ ವೆಂಕಟೇಶ್ ರೆಡ್ಡಿ ಅವರನ್ನು ಪೋಷಕರು ಬರಮಾಡಿಕೊಂಡರು.

ಉಕ್ರೇನ್​ನಿಂದ ವಾಪಸ್​ ಬಂದ ವಿದ್ಯಾರ್ಥಿಗಳು ಮಾತನಾಡಿ, ವೆಸ್ಟ್ರನ್​ ಉಕ್ರೇನ್​ನಲ್ಲಿ ಅಷ್ಟೊಂದು ಸಮಸ್ಯೆ ಇರಲಿಲ್ಲ. ಆದ್ರೆ ಗಡಿಗೆ ಬರುವಾಗ ಕೊಂಚ ಸಮಸ್ಯೆಯಾಯಿತು. ನಮ್ಮನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ ಎಂದು ಪ್ರಧಾನಿ ಮೋದಿ, ಕರ್ನಾಟಕ ಸರ್ಕಾರ, ಭಾರತ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದರು.


Spread the love

About Laxminews 24x7

Check Also

20 ವರ್ಷಗಳಿಂದ ಕಳ್ಳತನ: ಕುಖ್ಯಾತ ಖದೀಮ ಬೆಂಗಳೂರು ಪೊಲೀಸರ ಬಲೆಗೆ

Spread the loveಬೆಂಗಳೂರು: ಕಳ್ಳತನವನ್ನೇ ಕಾಯಕ ಮಾಡಿಕೊಂಡು ಹಾಡಹಾಗಲೇ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಖದೀಮನೋರ್ವ ಇಲ್ಲಿನ ವಿದ್ಯಾರಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ಧಾನೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ