ಬೆಂಗಳೂರು: ಮೇಕೆದಾಟು ಯೋಜನೆಯಿಂದ ಬೆಂಗಳೂರಿಗೆ ನೀರು ಕೊಡುವ ವ್ಯವಸ್ಥೆ ಬಿಜೆಪಿಯಿಂದ ಮಾತ್ರ ಸಾಧ್ಯವಿದೆ ಎನ್ನುವ ವಿಶ್ವಾಸ ಬೆಂಗಳೂರಿನ ಜನತೆಗೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು,ಎತ್ತಿನಹೊಳೆ ಯೋಜನೆಯಲ್ಲಿ ಬೆಂಗಳೂರಿಗೆ ಕುಡಿಯುವ ನೀರಿಗಾಗಿ 2 ಟಿಎಂಸಿ ನೀರನ್ನು ಒದಗಿಸಲು ಡಿಪಿಆರ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ .ಉತ್ತರ ಭಾಗದ ನೀರಿನ ಸಮಸ್ಯೆಯನ್ನು ಇದರಿಂದ ಬಗೆಹರಿಸಲು ಸಾಧ್ಯ. ನಾನು ನೀರಾವರಿ ಸಚಿವನಿದ್ದಾಗ ಮೇಕೆದಾಟು ಯೋಜನೆ 1996 ರಲ್ಲಿ ಪ್ರಾರಂಭವಾಯಿತು. ಈಗ ಮಾಡುತ್ತಿರುವ ಪ್ರತಿಭಟನೆಯಿಂದಲ್ಲ ಅಂತ ಕಾಂಗ್ರೆಸ್ ಪಾದಯಾತ್ರೆಯನ್ನ ಲೇವಡಿ ಮಾಡಿದರು.
1996ರಲ್ಲಿ ಕರ್ನಾಟಕ ವಿದ್ಯುತ್ ನಿಗಮ ಯೋಜನಾ ವರದಿಯನ್ನು ತಯಾರು ಮಾಡಿತ್ತು. ಅದು ವಿದ್ಯುತ್ ಉತ್ಪಾದನೆಯ ನಾಲ್ಕು ಯೋಜನೆಗಳಲ್ಲಿ ಪೈಕಿ ಮೇಕೆದಾಟು ಒಂದು. ಕೇಂದ್ರ ಸರ್ಕಾರದಿಂದ ಆಗಬೇಕೆಂಬ ಜಿಜ್ಞಾಸೆಗೆ ಒಳಗಾಗಿ ಸ್ವಲ್ಪ ದಿನ ವಿಳಂಬವಾಯಿತು. ಡಿಪಿಆರ್ ಮರುನಾಮಕರಣ ಮಾಡಿ ಒಂದೇ ಸಾರಿ ನೀರು ಸಂಗ್ರಹ ಮಾಡಿದರೆ ಉಳಿಯುತ್ತದೆ ಎಂದು ಡಿಪಿಆರ್ ಗೆ ಹೊಸ ಸ್ವರೂಪ ನೀಡಿ ಕುಡಿಯುವ ನೀರಿಗೆ ಈ ಯೋಜನೆಯನ್ನು ಸಿದ್ಧಮಾಡಿದ್ದೆವು ಎಂದರು.