Breaking News

ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿ ಅರೆಸ್ಟ್

Spread the love

ಚಿಕ್ಕೋಡಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿರುವ ಘಟನೆ‌ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಆಶಾ ಪ್ರದೀಪ ಕಾಂಬಳೆ (35 ) ಕೊಲೆಯಾದ ಮಹಿಳೆ. ಈಕೆಯ ಪತಿ ಪ್ರತಾಪ್ ಅಲಿಯಾಸ್ ಪ್ರದೀಪ ಕಾಂಬಳೆ (35) ಕೊಲೆ ಮಾಡಿದ ಆರೋಪಿ. ಬಂಧಿತ ಆರೋಪಿ ಪ್ರದೀಪ ಪ್ರತಿದಿನ ಕುಡಿದು ಹೆಂಡತಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ, ಕುಡಿದ ಮತ್ತಿನಲ್ಲಿದ್ದ ಪ್ರದೀಪ್ ಪತಿಯ‌ ಸೀರೆಯಿಂದಲೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ