Breaking News
Home / ರಾಜಕೀಯ / ಭಾರತೀಯ ವಿದ್ಯಾರ್ಥಿಯ ಸಾವು ಹಿನ್ನೆಲೆ, ಸಮನ್ಸ್ ಜಾರಿಗೊಳಿಸಿದ ಭಾರತ ಸರ್ಕಾರ

ಭಾರತೀಯ ವಿದ್ಯಾರ್ಥಿಯ ಸಾವು ಹಿನ್ನೆಲೆ, ಸಮನ್ಸ್ ಜಾರಿಗೊಳಿಸಿದ ಭಾರತ ಸರ್ಕಾರ

Spread the love

ಉಕ್ರೇನ್ ಮೇಲಿನ ರಷ್ಯಾದ ದಾಳಿಯ ನೇರ ಪರಿಣಾಮ ಭಾರತದ ಮೇಲೂ ಕಾಣಿಸತೊಡಗಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ (Indian Student Death In Ukraine) ಸಾವನ್ನಪ್ಪಿದ್ದಾನೆ.

ವಿದ್ಯಾರ್ಥಿಯನ್ನು ಕರ್ನಾಟಕದ (Karnataka Student) ನವೀನ್ (Naveen) ಎಂದು ಗುರುತಿಸಲಾಗಿದೆ. ಈ ಸಂಬಂಧ ಉಕ್ರೇನ್ ಮತ್ತು ರಷ್ಯಾ ರಾಯಭಾರಿಗಳಿಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿದೆ.

ರಷ್ಯಾ (Russia) ಮತ್ತು ಉಕ್ರೇನ್ (Ukraine) ರಾಯಭಾರಿಗಳಿಗೆ ಬುಲಾವ್
ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi), ವಿದೇಶಾಂಗ ಕಾರ್ಯದರ್ಶಿ ಹರ್ಷ್ ಶ್ರಿಂಗ್ಲಾ (Harsh Shringla) ಅವರು ರಷ್ಯಾ ಮತ್ತು ಉಕ್ರೇನ್ ರಾಯಭಾರಿಗಳಿಗೆ ಕರೆ ಮಾಡಿ ಖಾರ್ಕಿವ್‌ನಲ್ಲಿರುವ ಭಾರತೀಯ ಪ್ರಜೆಗಳು ಮತ್ತು ಇತರ ಸಂಘರ್ಷ ವಲಯಗಳಲ್ಲಿರುವರನ್ನು ತಕ್ಷಣವೇ ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸುವಂತೆ ಪುನರುಚ್ಚರಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್‌ನಲ್ಲಿಯೂ ನಮ್ಮ ರಾಯಭಾರಿಗಳು ಇದೇ ರೀತಿಯ ಕ್ರಮವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ನವೀನ್ ಕುರಿತು ಟ್ವೀಟ್ ಮಾಡಿರುವ ಬಾಗ್ಚಿ, ‘ಇಂದು ಬೆಳಗ್ಗೆ ಖಾರ್ಕಿವ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾವು ಬಹಳ ದುಃಖದಿಂದ ದೃಢೀಕರಿಸುತ್ತೇವೆ. ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಚಿವಾಲಯ ಸಂಪರ್ಕದಲ್ಲಿದೆ ಎಂದು ಅವರು ಹೇಳಿದ್ದಾರೆ.ಭಾರತೀಯ ನಾಗರಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ
ಖಾರ್ಕಿವ್‌ನಲ್ಲಿ ಪರಿಸ್ಥಿತಿ ಹದಗೆಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಖಾರ್ಕಿವ್‌ನಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಉಕ್ರೇನ್‌ನಲ್ಲಿ ಸಿಕ್ಕಿಬಿದ್ದಿರುವ ನಮ್ಮ ನಾಗರಿಕರ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ಪ್ರಯತ್ನಗಳನ್ನು ಮುಂದುವರೆಸುತ್ತಿದ್ದೇವೆ ಎಂದು ಹೇಳಿದ್ದಾರೆ


Spread the love

About Laxminews 24x7

Check Also

3 ದಿನ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

Spread the love ಬೆಂಗಳೂರು : ರಾಜ್ಯಕ್ಕೆ ಬರುವ ಅನುದಾನಗಳ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ