ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ಗೋಕಾಕ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾಧ್ಯಮಕ್ಕೆ ಹೇಳಿಕೆಗಳನ್ನು ನೀಡಲು ಅಷ್ಟೇ ಆದ್ಯತೆ ನೀಡುತ್ತಿದೆ. ಅಲ್ಲಿ ನಮ್ಮ ಭಾರತೀಯ ವಿದ್ಯಾರ್ಥಿಗಳು ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಷಯದಲ್ಲಿ ಪ್ರಚಾರ ಪಡೆಯುವುದು ಸರಿಯಲ್ಲ ಎಂದರು.
ಕೇಂದ್ರ ಸರ್ಕಾರದ ವಿಳಂಬ ನೀತಿಯಿಂದ ಹಾವೇರಿ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿ ನವೀನ್ ನನ್ನು ಕಳೆದುಕೊಳ್ಳಬೇಕಾಯಿತು. ಇನ್ನಾದರೂ ಏಚ್ಚೆತ್ತು ಬೇಗ ಯುದ್ದ ಪೀಡಿತ ಪ್ರದೇಶದಲ್ಲಿ ಸೀಲುಕಿದ್ದ ವಿದ್ಯಾರ್ಥಿಗಳನ್ನು ಕರೆ ತರಬೇಕೆಂದು ಆಗ್ರಹಿಸಿದರು.
2ನೇ ಹಂತದ ಮೇಕೆದಾಟು ಪಾದಯಾತ್ರೆ 3ನೇ ದಿನ ನಡೆಯುತ್ತಿದ್ದು, ಜನ ಬೆಂಬಲ ಸಿಕ್ಕಿದೆ. ಒಂದನೇ ಹಂತದ ಪಾದಯಾತ್ರೆಯಲ್ಲಿ ನಮ್ಮ ನಾಯಕರ ಮೇಲೆ ಕೇಸ್ ದಾಖಲು ಮಾಡಿದ್ದರು. ಈಗ ಮತ್ತೆ ಎರಡನೇ ಹಂತದ ಪಾದಯಾತ್ರೆಯಲ್ಲಿ ಭಾಗಿಯಾದ ನಾಯಕರ ಮೇಲೆ ಕೇಸ್ ದಾಖಲು ಮಾಡಿದ್ದಾರೆ. ಈ ವಿರುದ್ದ ಕಾನೂನ ಪ್ರಕಾರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.