ಹಾವೇರಿ: ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು. ಆತನ ಜೊತೆಗೆ ಹೋದವರು ಎಲ್ಲರೂ ವಾಪಸ್ ಜೀವಂತವಾಗಿ ಬರುತ್ತಿದ್ದಾರೆ. ಆದರೆ ನನ್ನ ತಮ್ಮ ಬರಲೇ ಇಲ್ಲ ಎಮದು ಮೃತ ನವೀನ್ ಸಹೋದರ ಹರ್ಷ ಭಾವುಕರಾದರು.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಒಂದು ಕಡೆ ಅಪ್ಪ ಅಮ್ಮನನ್ನು ಸಮಾಧಾನ ಮಾಡಬೇಕು. ಮನೆಯಲ್ಲಿ ನಾನೇ ಹಿರಿಯ ಮಗ ಅವರ ಮುಂದೆ ನಾನು ಅತ್ತರೆ ನನಗೆ ನೋವು ತಡೆಯಲು ಆಗುತ್ತಿಲ್ಲ ಎಂದು ಗದ್ಗದಿತರಾದರು.
ರಷ್ಯಾ-ಉಕ್ರೇನ್ ನಡುವಿನ ಯುದ್ಧದ ತೀವ್ರಗೊಳ್ಳುತ್ತಿದೆ. ಆದಷ್ಟು ಬೇಗ ಉಕ್ರೇನ್ ತೊರೆಯಿರಿ ಎಂದು ಕೇಂದ್ರ ಸರ್ಕಾರ ಸೂಚನೆ ಕೊಟ್ಟ ಬೆನ್ನಲ್ಲೇ ರಷ್ಯಾ ಶೆಲ್ ದಾಳಿಗೆ ಕನ್ನಡಿಗ ನವೀನ್ (22) ಬಲಿಯಾಗಿದ್ದಾರೆ. ಖಾರ್ಕೀವ್‍ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿಯ ನವೀನ್ ದುರಂತ ಸಾವನ್ನಪ್ಪಿದ್ದಾರೆ. ಖಾರ್ಕೀವ್‍ನಲ್ಲಿ ಇವತ್ತು ಬೆಳಗ್ಗೆ 7 ಗಂಟೆಗೆ ಸೂಪರ್ ಮಾರ್ಕೆಟ್‍ಗೆ ಹೋಗಿ ಸಾಲಿನಲ್ಲಿ ನಿಂತಿದ್ದಾಗ ನವೀನ್ ದುರ್ಮರಣಕ್ಕೀಡಾಗಿದ್ದಾರೆ.