Breaking News

ಕರ್ನಾಟಕದ ವಿದ್ಯಾರ್ಥಿ ನವೀನ್​(21) ಸಾವನ್ನಪ್ಪಿದ್ದು, ಘಟನೆಯ ಸೂಕ್ತ ತನಿಖೆ ನಡೆಸಲು ರಷ್ಯಾ ಮುಂದಾಗಿದೆ.

Spread the love

ನವದೆಹಲಿ: ಉಕ್ರೇನ್​​ನ ಖಾರ್ಕಿವ್​​ ಮೇಲೆ ರಷ್ಯಾ ನಡೆಸಿರುವ ಶೆಲ್ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್​(21) ಸಾವನ್ನಪ್ಪಿದ್ದು, ಘಟನೆಯ ಸೂಕ್ತ ತನಿಖೆ ನಡೆಸಲು ರಷ್ಯಾ ಮುಂದಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಭಾರತದಲ್ಲಿರುವ ರಷ್ಯಾ ರಾಯಭಾರಿ ಡೇನಿಸ್​​ ಅಲಿಪೋವ್​​, ಭಾರತೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಸಾವಿಗೆ ಸಂತಾಪ ಸೂಚಿಸಿದರು. ತೀವ್ರ ಸಂಘರ್ಷದ ಸಂದರ್ಭದಲ್ಲಿ ಉಕ್ರೇನ್​​ನಲ್ಲಿರುವ ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಲು ಮತ್ತು ನಡೆದು ಹೋಗಿರುವ ದುರದೃಷ್ಟಕರ ಘಟನೆಯ ಬಗ್ಗೆ ಸರಿಯಾದ ತನಿಖೆ ನಡೆಸಲು ರಷ್ಯಾ ತನ್ನ ಕೈಲಾದ ಎಲ್ಲ ಕೆಲಸಗಳನ್ನು ಮಾಡುತ್ತದೆ ಎಂದರು.

ಉಕ್ರೇನ್​​ನ ವಿವಿಧ ನಗರಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ರಷ್ಯಾ ದೇಶದ ಮೂಲಕ ಸ್ಥಳಾಂತರ ಮಾಡುವಂತೆ ಭಾರತ ಮಾಡಿರುವ ಮನವಿಯನ್ನು ನಾವು ಸ್ವೀಕರಿಸಿದ್ದು, ಅವರನ್ನು ಸುರಕ್ಷಿತವಾಗಿ ಕರೆತರುವ ದೃಷ್ಟಿಯಿಂದ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಎಲ್ಲಾ ಜಿಲ್ಲೆಗಳಲ್ಲಿ ಅಕ್ಕ ಪಡೆ ಯೋಜನೆ ಜಾರಿಗೆ ನಿರ್ಧಾರ

Spread the loveಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೆ ನಿರ್ಧಾರ ಮಾಡಲಾಗಿದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವುದು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ