Breaking News

ನವೀನ್ ಪಾರ್ಥೀವ ಶರೀರ ತರಲು ಸತತ ಪ್ರಯತ್ನ

Spread the love

ಹಾವೇರಿ : ಉಕ್ರೇನ್ ದೇಶದಲ್ಲಿ ಶೆಲ್ ದಾಳಿಯಿಂದ ಅಮಾಯಕ ನವೀನ್ ಮೃತಪಟ್ಟಿದ್ದು ನಮ್ಮೆಲ್ಲರಿಗೂ ಆಘಾತ ಉಂಟುಮಾಡಿದೆ. ತಂದೆ-ತಾಯಿಗೆ ತೀವ್ರ ಆಘಾತವಾಗಿದ್ದು, ಮೃತದೇಹ ತರಲು ಸತತ ಪ್ರಯತ್ನ ಮಾಡಲಾಗುತ್ತಿದೆ. ಇದರೊಂದಿಗೆ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರ ಜೀವ ರಕ್ಷಣೆಯೊಂದಿಗೆ ಅವರನ್ನು ದೇಶಕ್ಕೆ ಕರೆತರಲು ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಷಿ ಅವರು ಹೇಳಿದರು .

ರಾಣೇಬೆನ್ನೂರು ತಾಲೂಕು ಚಳಗೇರಿ ಗ್ರಾಮದಲ್ಲಿ ಬುಧವಾರ ಪಾಲಕರಿಗೆ ಸಾಂತ್ವನ ಹೇಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶಾಂಗ ಸಚಿವ ಜಯಶಂಕರ ಅವರೊಂದಿಗೆ ಫೆ.24 ರಿಂದ ಸಂಪರ್ಕದಲ್ಲಿದ್ದೇನೆ ಹಾಗೂ ಮಾನ್ಯ ಪ್ರಧಾನ ಮಂತ್ರಿಗಳು ಈ ಕಾರ್ಯಕ್ಕಾಗಿ ನಾಲ್ಕು ಜನ ಮಂತ್ರಿಗಳನ್ನು ಗಡಿ ರೇಖೆಗೆ ನೇಮಕಮಾಡಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ