ಉಡುಪಿ: ಸಂತೆಕಟ್ಟೆ ಎಂಬಲ್ಲಿ ಕೇರಳದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ, ಕರಾವಳಿ ಕಾವಲು ಪಡೆಯ ಎಎಸ್‌ಐ ಗಣೇಶ್ ಪೈ (58)ಹಾಗೂ ಪುತ್ರಿ ಗಾಯತ್ರಿ ಪೈ (27)ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬುಧವಾರ ಮುಂಜಾನೆ ಘಟನೆ ನಡೆದಿದೆ.
ಹುಬ್ಬಳ್ಳಿಯಿಂದ ಬಂದ ಪುತ್ರಿಯನ್ನು ಬಸ್ ನಿಲ್ದಾಣದಿಂದ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಕೊಲ್ಲೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದಿತ್ತು. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.