ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ಗ್ರಾಮದಲ್ಲಿ ವ್ಯಕ್ತಿ ನಾಪತ್ತೆಯಾಗಿದ್ದು, ಪೊಲೀಸರ ತನಿಖೆಯಲ್ಲಿ ಆತ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ತಾಯಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಅಮರಪ್ಪನೊಂದಿಗೆ ಬಸವರಾಜ ಜಗಳವಾಡಿದ್ದಾನೆ.
ಬಳಿಕ ತಾಯಿ ಅಮರಪ್ಪ ಮತ್ತು ಅಮರೇಶ ಸೇರಿಕೊಂಡು ದೊಣ್ಣೆಯಿಂದ ಹೊಡೆದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ತಾವರಗೇರಾ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
Laxmi News 24×7