ಬೆಂಗಳೂರು: ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ನಗರದಲ್ಲಿ ಇನ್ಮುಂದೆ ಯಾವುದೇ ಪ್ರತಿಭಟನೆಗಳನ್ನು ಕೈಗೊಳ್ಳದಂತೆ ಆದೇಶ ಹೊರಡಿಸಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುವ ವೇಳೆಯೂ ನಗರದ ಸಾರಿಗೆ-ಸಂಚಾರ ಹಾಗೂ ಜನರ ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸರ್ಕಾರಕ್ಕೆ ತಾಕೀತು ಮಾಡಿತು.
ಇಂದು ಹೈಕೋರ್ಟ್ ತಲುಪಲು ನಮಗೇ ಒಂದು ಗಂಟೆ ತಗುಲಿತು. ಜನಸಾಮಾನ್ಯರು ಓಡಾಡುವುದು ಹೇಗೆ? ಎಂದು ಪ್ರಶ್ನಿಸಿದ ಹೈಕೋರ್ಟ್ ಇದಕ್ಕೆಲ್ಲಾ ನಿರ್ಬಂಧಗಳನ್ನು ವಿಧಿಸಿ ಎಂದು ಸರ್ಕಾರಕ್ಕೆ ಸೂಚನೆ ನೀಡಿತು.
Laxmi News 24×7