Breaking News
Closed businesses for COVID-19 pandemic outbreak, closure sign on retail store window banner background. Government shutdown of restaurants, shopping stores, non essential services.

ರಾಜ್ಯದಲ್ಲಿ ಕೋವಿಡ್ ನಿರ್ಬಂಧ ಸಂಪೂರ್ಣ ತೆರವು

Spread the love

ಬೆಂಗಳೂರು: ಕೊರೋನಾ ಸೋಂಕು ಭಾರೀ ಪ್ರಮಾಣದಲ್ಲಿ ಇಳಿಮುಖವಾದ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಜನಜೀವನ ಹಾಗೂ ಆರ್ಥಿಕತೆಗೆ ಮತ್ತೆ ಚೇತರಿಕೆ ಒದಗಿಸಲು,ಶಿಕ್ಷಣ ,ಸಾಂಸ್ಕೃತಿಕ, ಸಭೆ,ಸಮಾರಂಭಗಳು,ಕ್ರೀಡೆ,ಮನರಂಜನಾ ಚಟುವಟಿಕೆಗಳು, ಜಾತ್ರೆ ,ಉತ್ಸವಗಳು ಸೇರಿದಂತೆ ವಿವಿಧ ರಂಗಗಳ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ

 

ಮದುವೆ,ಶವ ಸಂಸ್ಕಾರಗಳಲ್ಲಿ ಭಾಗವಹಿಸುವವರ ಸಂಖ್ಯೆಗೆ ಮಿತಿಗೊಳಿಸಲಾಗಿದ್ದ ನಿರ್ಬಂಧಗಳನ್ನು ಕೂಡ ಮುಕ್ತಗೊಳಿಸಲಾಗಿದೆ.ಸಿನೆಮಾ,ನಾಟಕ ಥೇಟರುಗಳು, ಶಾಲೆ,ಕಾಲೇಜು,ಗ್ರಂಥಾಲಯ, ತರಬೇತಿ ಕೇಂದ್ರಗಳು ,ಕ್ರೀಡಾ ಚಟುವಟಿಕೆಗಳು,ಎಲ್ಲಾ ವಾಣಿಜ್ಯ ವಹಿವಾಟುಗಳಿಗೂ ಕೂಡ ಯಾವುದೇ ನಿರ್ಬಂಧಗಳು ಇರುವುದಿಲ್ಲ. ಸಭೆ,ಸಮಾರಂಭ,ವಹಿವಾಟುಗಳಿಗೆ ಪೂರ್ವಾನುಮತಿಯ ಅಗತ್ಯ ಇರುವುದಿಲ್ಲ.ಕೋವಿಡ್ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತಿತರ ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು.15 ರಿಂದ 18 ವರ್ಷದವರೂ ಸೇರಿ ಅರ್ಹ ವಯೋಮಾನದವರೆಲ್ಲರೂ ಮೊದಲ ಮತ್ತು ಎರಡನೇ ಡೋಸ್ ಲಸಿಕೆ ಪಡೆಯಬೇಕು.ಆರೋಗ್ಯ, ಮುಂಚೂಣಿ ಕಾರ್ಯಕರ್ತರು, ಸಹ ಅಸ್ವಸ್ಥತೆ (ಕೊ-ಮಾರ್ಬಿಡಿಟಿ) ಹೊಂದಿದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಬೂಸ್ಟರ್ ಡೋಸ್ ಲಸಿಕೆ ಪಡೆಯಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 


Spread the love

About Laxminews 24x7

Check Also

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ

Spread the loveಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ