ಶಿವಮೊಗ್ಗ, ಮಾರ್ಚ್ 3: ಸಾಕು ನಾಯಿ ಕರೆದುಕೊಂಡು ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯಾಳುವನ್ನು ದಾಖಲಿಸಲಾಗಿದೆ.
ಗೋಪಾಳದ ಪದ್ಮಾ ಟಾಕೀಸ್ ಬಳಿ ಗುರುವಾರ ಸಂಜೆ ಈ ಘಟನೆ ಸಂಭವಿಸಿದೆ.
ಸ್ಥಳೀಯ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆಯಾಗಿದೆ. ತಲೆಗೆ ತೀವ್ರ ಗಾಯವಾಗಿದ್ದು, ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.