ವಾರಣಾಸಿ (ಯುಪಿ): ವೈದ್ಯಕೀಯ ಶಿಕ್ಷಣ ಪಡೆಯಲು ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು(Indian Students ) ವಿದೇಶಕ್ಕೆ ತೆರಳಲು ಹಿಂದಿನ ಸರ್ಕಾರಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಆರೋಪಿಸಿದರು. ವೈದ್ಯಕೀಯ ಶಿಕ್ಷಣಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್ಗೆ ತೆರಳುತ್ತಾರೆ.
ಆದರೆ ಕಳೆದೊಂದು ವಾರದಿಂದ ಉಕ್ರೇನ್ (Ukraine) ದೇಶದ ಮೇಲೆ ರಷ್ಯಾ ದಾಳಿ ನಡೆಸಿದ್ದರಿಂದ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಯುದ್ಧ ಪೀಡಿತ ಪ್ರದೇಶದಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ವಾಪಸ್ ತರಲು ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಯೋಜನೆಯನ್ನು ಕೈಗೆತ್ತಿಗೊಂಡಿದೆ. ಈಗಾಗಲೇ ಸಾವಿರಾರು ವಿದ್ಯಾರ್ಥಿಗಳು ಸುರಕ್ಷಿತವಾಗಿ ಭಾರತ ತಲುಪಿದ್ದಾರೆ. ಹೀಗೆ ವಾಪಸ್ ಆದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ವೇಳೆ ಭಾರತದಲ್ಲಿ ಸರಿಯಾದ ಶಿಕ್ಷಣ ವ್ಯವಸ್ಥೆ ಇಲ್ಲದಿರುವ ಕಾರಣ ನಾವೆಲ್ಲಾ ಉಕ್ರೇನ್ಗೆ ಹೋಗಬೇಕಾಯಿತು ಎಂದು ಕೆಲ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆಲ್ಲಾ ಕಾರಣ ಹಿಂದಿನ ಸರ್ಕಾರಗಳು ಎಂದು ಉತ್ತರಿಸಿದ ಪ್ರಧಾನಿ, ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಲು ತಮ್ಮ ಸರ್ಕಾರವು ಶ್ರಮಿಸುತ್ತಿದೆ ಎಂದು ಭರವಸೆ ನೀಡಿದರು.
ಪುಟಿನ್ ಜೊತೆ PM Modi ಮಾತುಕತೆ ಬಳಿಕ ದೊಡ್ಡ ಬದಲಾವಣೆ.. ಯುವತಿಯರ ಕುಟುಂಬಸ್ಥರು ನಿರಾಳ..!?
ಅವರು ಕೋಪಗೊಳ್ಳುವುದು ಸಹಜ
ಭಾರತೀಯ ಶಿಕ್ಷಣ ವ್ಯವಸ್ಥೆ ಬಗೆಗೆ ವಿದ್ಯಾರ್ಥಿಗಳು, ಪೋಷಕರು ವ್ಯಕ್ತಪಡಿಸಿದ ಸಿಟ್ಟಿಗೆ ಪ್ರತಿಕ್ರಿಯಿಸಿದ ಮೋದಿ, ಈ ಬಿಕ್ಕಟ್ಟಿನಲ್ಲಿ ಅವರು ಕೋಪಗೊಳ್ಳುವುದು ಸಹಜ ಎಂದು ನಾನು ಭಾವಿಸುತ್ತೇನೆ. ಅವರು ಕಷ್ಟಗಳನ್ನು ಎದುರಿಸುತ್ತಿದ್ದಾರೆ, ಅದಕ್ಕಾಗಿ ವಿಷಾದಿಸುತ್ತೇನೆ ಎಂದರು. ಅನೇಕ ವಿದ್ಯಾರ್ಥಿಗಳು ಧನ್ಯವಾದಗಳನ್ನು ತಿಳಿಸಿದರು. ಯುದ್ಧ ಪೀಡಿತ ಪ್ರದೇಶದಲ್ಲಿ ಎಲ್ಲಾ ಭರವಸೆಯನ್ನು ಕಳೆದುಕೊಂಡಾಗ ರಕ್ಷಿಸಿದ್ದಕ್ಕಾಗಿ ಸರ್ಕಾರವನ್ನು ಶ್ಲಾಘಿಸಿದರು. ಈ ತೊಂದರೆಗಳಿಗೆ ಬಲಿಷ್ಠ ಭಾರತವೇ ಉತ್ತರ ಎಂದು ಹೇಳಿದ ಪ್ರಧಾನಿ ಮೋದಿ, ಚಿಕ್ಕ ವಯಸ್ಸಿನಲ್ಲಿ ಇಂತಹ ಅನುಭವವನ್ನು ಅನುಭವಿಸಿದ ವಿದ್ಯಾರ್ಥಿಗಳ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.
Laxmi News 24×7