ಬೆಂಗಳೂರು, ಮಾರ್ಚ್ 04: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನ ಚೊಚ್ಚಲ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಕೃಷಿ ವಲಯಕ್ಕೆ ನೀಡುವ ಕೊಡುಗೆಗಳ ಪ್ರಸ್ತಾಪ ಮಾಡಿದ್ದಾರೆ. ಬಳ್ಳಾರಿ, ಬೆಳಗಾವಿಯಲ್ಲಿ ಹೊಸ ಕೃಷಿ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೃಷಿ ಕ್ಷೇತ್ರಕ್ಕೆ ನೀಡುವ ಕೊಡುಗೆಗಳ ಪ್ರಸ್ತಾಪ ಮಾಡಿದ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಳ್ಳಾರಿ ಜಿಲ್ಲೆಯ ಹಗರಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಹೊಸ ಕೃಷಿ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾಗೆಯೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ಸ್ಥಾಪನೆ ಮಾಡಲಾಗುತ್ತದೆ. ರೈತರಿಗೆ ರಿಯಾಯಿತಿ ದರದಲ್ಲಿ 24 ಸಾವಿರ ಕೋಟಿ ರೂ. ಸಾಲ ನೀಡಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ತನ್ನ ಚೊಚ್ಚಲ ಬಜೆಟ್‌ನಲ್ಲಿ ಘೋಷಣೆ ಮಾಡಿದರು.
ಹಾವೇರಿಯ ಹಿರೆಕೆರೋರಿನಲ್ಲಿ ಗೋವಿನ ಜೋಳ ಸಂಶೋಧನಾ ಸಂಸ್ಥೆ ಸ್ಥಾಪನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದರು. ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 8,457 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಪ್ರಸ್ತಾಪ ಮಾಡಿದರು.ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ. ಡೀಸೆಲ್‌ಗೆ ಸಹಾಯಧನ ನೀಡಲಾಗುತ್ತದೆ. ಆಳ ಸಮುದ್ರ ಮೀನುಗಾರಿಗೆಗೆ ಪ್ರೋತ್ಸಾಹ ನೀಡಲಾಗುವುದು. 5 ಸಾವಿರ ಮೀನುಗಾರರಿಗೆ ರಾಜೀವ್ ಗಾಂಧಿ ಯೋಜನೆ ಯಡಿ ಮನೆ ನಿರ್ಮಾಣ ಮಾಡಲಾಗುವುದು ಎಂದು ಕೂಡಾ ರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.