Breaking News

ಕರ್ನಾಟಕ ಬಜೆಟ್‌ 2022: ಯಾವ ಇಲಾಖೆಗೆ ಎಷ್ಟು ಅನುದಾನ,

Spread the love

ಬೆಂಗಳೂರು, ಮಾರ್ಚ್ 04: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-2023ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಎಲ್ಲಾ ಇಲಾಖೆಗಳಿಗೆ ಅನುದಾನವನ್ನು ಘೋಷಣೆ ಮಾಡಿದ್ದಾರೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದೆ.

ಈ ಬಾರಿ 2,53,165 ಕೋಟಿ ರೂ.

ಬಜೆಟ್​ ಮಂಡನೆ ಆಗಿದ್ದು, ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರವನ್ನು ಹೊಂದಿದೆ. ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ – ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮವನ್ನು ರೂಪಿಸಲಾಗಿದೆ.

ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಲಯವಾರು ವಿಂಗಡಣೆ ಮಾಡಿ ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ಯಾವ ವಲಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ ಎಂಬ ಬಗ್ಗೆ ಇಲ್ಲಿ ವಿವರ ಇದೆ. ಮುಂದೆ ಓದಿ….

ಯಾವ ಇಲಾಖೆಗೆ ಎಷ್ಟು ಮೊತ್ತ ಹಂಚಿಕೆ?

* ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ

* ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ

* ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ

* ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ

* ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನುದಾನ

* ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ,

* ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ

* ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ

* ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ

* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ

* ಆಹಾರ ಇಲಾಖೆ – 2,288 ಕೋಟಿ ರೂಪಾಯಿ ಅನುದಾನ

* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ

* ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ

* ಒಳಾಡಳಿತ ಮತ್ತು ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ

ಇನ್ನುಳಿದಂತೆ ರಾಜ್ಯಗಳ ಕೆರೆಗಳ ಅಭಿವೃದ್ದಿಗೆ 500 ಕೋಟಿ ರೂ, ತಾಲೂಕುಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿ ಹಾಗೂ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ 8409 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ