ಬೆಂಗಳೂರು, ಮಾರ್ಚ್ 4: ರಾಜ್ಯದ ಮುಜರಾಯಿ ಇಲಾಖೆ ‘ಸಿ’ ದರ್ಜೆ ದೇವಾಲಯಗಳ ಅರ್ಚಕರ ತಸ್ತೀಕ್ ಭತ್ಯೆಯನ್ನು ಬಜೆಟ್‌ನಲ್ಲಿ ಹೆಚ್ಚಿಸುವ ನಿರೀಕ್ಷೆ ಇದೆ. ದೇವಸ್ಥಾನಗಳ ಅಭಿವೃದ್ದಿಯತ್ತ ವಿಶೇಷ ಕಾಳಜಿಯನ್ನು ಹೊಂದಿರುವ ಮುಖ್ಯಮಂತ್ರಿಗಳು ಮುಂದಿನ ಆಯವ್ಯಯದಲ್ಲಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಲಿದ್ದಾರೆ,” ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.
ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಬಜೆಟ್‌ನಲ್ಲಿ ಸಿ ಗ್ರೇಡ್ ದೇವಸ್ಥಾನಗಳಲ್ಲಿ ಅರ್ಚಕರ ಭತ್ಯೆ ಹೆಚ್ಚಿಸಲಾಗುವುದು ಎಂದರು. ಹೊಸಪೇಟೆಯ ಕೃಷ್ಣ ಮಠದಲ್ಲಿ ಗುರುವಾರ ಸಂಜೆ ಶ್ರೀ ರಾಘವೇಂದ್ರ ಸ್ವಾಮಿಗಳ ಸಪ್ತಾಹ ಉದ್ಘಾಟಿಸಿ ಮಾತನಾಡಿ, ದೇವಸ್ಥಾನದ ಅರ್ಚಕರಿಗೆ 6ನೇ ವೇತನ ಆಯೋಗದ ಶಿಫಾರಸನ್ನು ಜಾರಿಗೊಳಿಸಲಾಗಿದೆ. ಎ ಗ್ರೇಡ್ ದೇಗುಲಗಳ ಸಿಬ್ಬಂದಿಗಳಿಗೆ 6ನೇ ವೇತನ ಆಯೋಗದ ಅನ್ವಯ ಸಂಬಳ, ಭತ್ಯೆ ಸಿಗುತ್ತಿದೆಅಲ್ಲದೆ, ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸಲಾಗಿದೆ, ಇಲಾಖೆಯ ಅಡಿಯಲ್ಲಿ ಬರುವ ಅರ್ಚಕರು ಸಿಬ್ಬಂದಿಗಳಿಗೆ ಅನ್ವಯವಾಗಲಿದೆ ಎಂದರು.