ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 2022ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಈ ಬಾರಿ ಬಜೆಟ್ನಲ್ಲಿ ನೀಡಿರುವ ಕೊಡುಗೆಗಳು ಈ ಕೆಳಕಂಡಂತಿವೆ.
* ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತ ಹಾಗೂ ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು ಹಳೇಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ.
* ಬೇಲೂರು, ಹಳೇಬೀಡು, ಸೋಮನಾಥಪುರ ಒಳಗೊಂಡಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ.
* ಜೋಗ ಜಲಪಾತದಲ್ಲಿ 116 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್‌ವೇ ಅಭಿವೃದ್ಧಿ.
* ನಂದಿ ಬೆಟ್ಟದಲ್ಲಿ 93 ಕೋಟಿ ರೂ.ವೆಚ್ಚದಲ್ಲಿ ರೋಪ್‌ವೇ ನಿರ್ಮಾಣಕ್ಕೆ ಅನುಮೋದನೆ. ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್‌ವೇ ನಿರ್ಮಾಣಕ್ಕೆ ಕ್ರಮ.