ಬೆಂಗಳೂರು: ರಾಜ್ಯದ ಪೌರ ಕಾರ್ಮಿಕರಿಗೆ ಅವರು ಕ್ಲಿಷ್ಟಕರ ಹಾಗೂ ಅಪಾಯಕರ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು, ಪೌರಕಾರ್ಮಿಕರಿಗೆ ಮಾಸಿಕ ರೂ.2000 ಸಂಕಷ್ಟ ಭತ್ಯೆಯನ್ನು ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಕೇಂದ್ರ ಪುರಸ್ಕೃತ ಯೋಜನೆಯಾದ ಸ್ವಚ್ಛಭಾರತ ಮಿಷನ್ 2.0 ಅನ್ನು ಮುಂದಿನ ಐದು ವರ್ಷಗಳ ಅವಧಿಯಲ್ಲಿ 2,245 ಕೋಟಿ ರೂಗಳ ಕೇಂದ್ರ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುವುದು ಎಂದರು.
ಪೌರ ಕಾರ್ಮಿಕರು ಕ್ಲಿಷ್ಟಕರ ಹಾಗೂ ಅಪಾಯಕರ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವುದನ್ನು ಗಮನದಲ್ಲಿಟ್ಟುಕೊಂಡು, ಮೊಟ್ಟ ಮೊದಲ ಬಾರಿಗೆ ಪೌರಕಾರ್ಮಿಕರಿಗೆ ಮಾಸಿಕ 2 ಸಾವಿರ ರೂ ಗಳ ಸಂಕಷ್ಟ ಭತ್ಯೆ ನೀಡಲಾಗುತ್ತದೆ ಎಂಬುದಾಗಿ ಘೋಷಿಸಿದರು